Sunday, November 29, 2026
Homeಕರಾವಳಿಮಂಗಳೂರುಮಂಗಳೂರು: ಅಂಗಡಿಗೆ ಹೋಗಿ ಬರುವುದಾಗಿ ಹೇಳಿ ಹೋದ ಯುವಕ ನಾಪತ್ತೆ

ಮಂಗಳೂರು: ಅಂಗಡಿಗೆ ಹೋಗಿ ಬರುವುದಾಗಿ ಹೇಳಿ ಹೋದ ಯುವಕ ನಾಪತ್ತೆ

- Advertisement -
- Advertisement -

ಮಂಗಳೂರು: ಅಂಗಡಿಗೆ ಹೋಗಿ ಬರುವುದಾಗಿ ಮನೆಯಲ್ಲಿ ಹೇಳಿ ಹೋದ ಯುವಕನೊಬ್ಬ ನಿಗೂಢವಾಗಿ ನಾಪತ್ತೆಯಾಗಿರುವ ಘಟನೆ ನಡೆದಿದ್ದು, ಈ ಸಂಬಂಧ ನಗರದ ಬಂದರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮೂಲತಃ ಬಾಗಲಕೋಟೆಯವರಾಗಿದ್ದು, ಪ್ರಸ್ತುತ ಮಂಗಳೂರಿನ ಗೌರಿ ಮಠದ ಬಳಿ ಬಾಡಿಗೆ ಮನೆಯಲ್ಲಿ ವಾಸವಿರುವ ಯಮನಪ್ಪ ಎಂಬವರ ಪುತ್ರ ರಾಕೇಶ್ ವೈ. (18) ನಾಪತ್ತೆಯಾದ ಯುವಕ.

ನವೆಂಬರ್ 17ರಂದು ರಾತ್ರಿ ಸುಮಾರು 7.30ರ ವೇಳೆಗೆ ರಾಕೇಶ್ ಅಂಗಡಿಗೆ ಹೋಗುವುದಾಗಿ ಮನೆಯಿಂದ ಹೊರಗೆ ಹೋಗಿದ್ದರು. ಆದರೆ ತಡರಾತ್ರಿಯಾದರೂ ಅವರು ಮನೆಗೆ ವಾಪಸ್ಸಾಗಿಲ್ಲ. ಆತಂಕಗೊಂಡ ಪೋಷಕರು ರಾಕೇಶ್ ಅವರ ಮೊಬೈಲ್‌ಗೆ ಕರೆ ಮಾಡಿದಾಗ ಅದು ಸ್ವಿಚ್ ಆಫ್ ಆಗಿರುವುದು ಕಂಡುಬಂದಿದೆ.

ಸಂಬಂಧಿಕರ ಮನೆ ಹಾಗೂ ಸುತ್ತಮುತ್ತಲಿನ ವಿವಿಧೆಡೆ ತೀವ್ರ ಹುಡುಕಾಟ ನಡೆಸಿದರೂ ಯಾವುದೇ ಸುಳಿವು ಪತ್ತೆಯಾಗಿಲ್ಲ. ಈ ಹಿನ್ನೆಲೆಯಲ್ಲಿ ಯುವಕನನ್ನು ಪತ್ತೆಹಚ್ಚಿ ಕೊಡುವಂತೆ ಕೋರಿ ಪೋಷಕರು ಬಂದರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

- Advertisement -

Latest News

error: Content is protected !!