Tuesday, June 23, 2026
Homeಕರಾವಳಿಮಂಗಳೂರುಮಂಗಳೂರು: 31 ಪ್ರಕರಣಗಳಲ್ಲಿ ಭಾಗಿಯಾಗಿ 9 ವರ್ಷಗಳಿಂದ ಪೊಲೀಸರಿಗೆ ಸಿಗದೇ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಮಂಗಳೂರು: 31 ಪ್ರಕರಣಗಳಲ್ಲಿ ಭಾಗಿಯಾಗಿ 9 ವರ್ಷಗಳಿಂದ ಪೊಲೀಸರಿಗೆ ಸಿಗದೇ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

- Advertisement -
- Advertisement -

ಮಂಗಳೂರು: 31 ಪ್ರಕರಣಗಳಲ್ಲಿ ಭಾಗಿಯಾಗಿ 9 ವರ್ಷಗಳಿಂದ ಪೊಲೀಸರಿಗೆ ಸಿಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಆಂಧ್ರಪ್ರದೇಶದಲ್ಲಿ ಪತ್ತೆ ಹಚ್ಚಿ ಬಂಧಿಸಿದ್ದಾರೆ. ಸಪ್ವಾನ್ ಹುಸೇನ್ ಬಂಧಿತ ಆರೋಪಿ.


ಸಪ್ವಾನ್ ಹುಸೇನ್ ಮೇಲೆ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ಮತ್ತು ಉಡುಪಿ ಜಿಲ್ಲೆ ವ್ಯಾಪ್ತಿಯ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 02 ಕೊಲೆ, 04 ಕೊಲೆಯತ್ನ, ಗ್ಯಾಂಗ್ ರೇಪ್, 05 ದರೋಡೆ, ಆಪಹರಣ, ಸುಲಿಗೆ, ಪೊಲೀಸ್ ಅಧಿಕಾರಿಗಳ ಮೇಲೆ ಹಲ್ಲೆ, ಕಳ್ಳತನ, ಸರಗಳ್ಳತನ, ಹಲ್ಲೆ, ಜೈಲಿನಲ್ಲಿ ಸಹ ಖೈದಿಗಳ ಮೇಲೆ ಹಲ್ಲೆ, ಅಕ್ರಮ ಕೂಟ ಸೇರಿ ಹಲ್ಲೆ, ಕೊಲೆ ಬೆದರಿಕೆ. ಕರ್ತವ್ಯಕ್ಕೆ ಅಡ್ಡಿ ದರೋಡೆಗೆ ತಯಾರಿ ಮತ್ತು ಸಂಚು ಮುಂತಾದ ಅಪರಾಧಗಳಿಗೆ ಸಂಬಂಧಿಸಿದ ಸುಮಾರು 31 ಪ್ರಕರಣಗಳು ದಾಖಲಾಗಿದೆ.
ಈತನ ವಿರುದ್ಧ ಮುಲ್ಕಿಯಲ್ಲಿ 2008ರಲ್ಲಿ ನಡೆದಿದ್ದ ಪ್ರವೀಣ್ ಕೊಲೆ ಪ್ರಕರಣದಲ್ಲಿ ಪ್ರಕರಣದಲ್ಲಿ ಹೈಕೋರ್ಟ್ ಈತನಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ಅಲ್ಲದೇ, ಕಾರ್ಕಳ ಠಾಣಾ ವ್ಯಾಪ್ತಿಯಲ್ಲಿ 2008 ರಲ್ಲಿ ದರೋಡೆ ಪ್ರಕರಣದಲ್ಲಿ ಮಾನ್ಯ ನ್ಯಾಯಾಲಯದಿಂದ 3 ವರ್ಷ ಶಿಕ್ಷೆಗೆ ಒಳಗಾಗಿರುತ್ತಾನೆ. ಈತನ ವಿರುದ್ಧ 12 ಪ್ರಕರಣಗಳು ನ್ಯಾಯಾಲಯದಲ್ಲಿ ವಿಚಾರಣಾ ಹಂತದಲ್ಲಿ ಬಾಕಿ ಇದ್ದು, ಮಾನ್ಯ ನ್ಯಾಯಾಲಯದಿಂದ ದಸ್ತಗಿರಿ ವಾರೆಂಟ್ ಗಳನ್ನು ಹೊರಡಿಸಲಾಗಿರುತ್ತದೆ. 05 ಪ್ರಕರಣಗಳಲ್ಲಿ ಮಾನ್ಯ ನ್ಯಾಯಾಲಯವು ಎಲ್.ಪಿ.ಸಿ ಎಂದು ಘೋಷಿಸಲಾಗಿದೆ.

2017 ನೇ ಇಸವಿಯಲ್ಲಿ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈತನು ತನ್ನ ಸಹಚರರೊಂದಿಗೆ ಸೇರಿಕೊಂಡು ಲೆಪ್ಪಿ ಸಪ್ವಾನ್ ಎಂಬಾತನನ್ನು ಅಪಹರಿಸಿ ಹಲ್ಲೆ ನಡೆಸಿ, ಕೊಲೆ ಮಾಡಿ ಆಗುಂಬೆ ಘಾಟಿಯಲ್ಲಿ ಎಸೆದ ಪ್ರಕರಣದಲ್ಲಿ ನೇರ ಭಾಗಿಯಾಗಿದ್ದ, ಆದರೆ ಪೊಲೀಸರ ಕೈಗೆ ಸಿಗದೆ ಎಸ್ಕೇಪ್ ಆಗಿದ್ದ. ಅಂಧ್ರಪ್ರದೇಶದ ರಾಯ್ ಚೋಟೆ ಪ್ರದೇಶದಲ್ಲಿ ತನ್ನ ಹೆಸರನ್ನು, ಉಮ್ಮರ್ ಮೊಹಮ್ಮದ್ ನಾಸಿರ್ ಎಂದು ಬದಲಿಸಿ, ನಕಲಿ ಹೆಸರಿನಲ್ಲಿ ಆಧಾರ್ ಕಾರ್ಡ್, ಪಾಸ್ ಪೋರ್ಟ್ ಮಾಡಿಸಿಕೊಂಡು. 2018 ರಿಂದ ವಿದೇಶಕ್ಕೆ ಪರಾರಿಯಾಗಿ ತಲೆಮರೆಸಿಕೊಂಡಿದ್ದನು. ವಿದೇಶಗಳಲ್ಲಿನ ಮಂಗಳೂರು ಮೂಲದ ಬ್ಯುಸಿನೆಸ್ ಮ್ಯಾನ್ ಗಳಿಂದ ಹಪ್ತಾ ವಸೂಲಿ ಮಾಡುತ್ತಿದ್ದ ಎಂಬ ದೂರುಗಳು ಬಂದಿದೆ.

ಇದೀಗ ಆರೋಪಿ ಸಪ್ವಾನ್ ಹುಸೈನ್ ನನ್ನು ಮಂಗಳೂರು ಸಿಸಿಬಿ ಪೊಲೀಸರು ಆಂದ್ರಪ್ರದೇಶ ರಾಯಚೋಟಿಯಿಂದ ವಶಕ್ಕೆ ಪಡೆದುಕೊಂಡು ಮುಂದಿನ ಕ್ರಮಕ್ಕಾಗಿ ಮುಲ್ಕಿ ಪೊಲೀಸ್ ಠಾಣೆಗೆ ಹಸ್ತಾಂತರಿಸಿದ್ದಾರೆ. ಇನ್ನು ಸಪ್ವಾನ್ ಹುಸೈನ್ ಗೆ ತಲೆಮರೆಸಿಕೊಳ್ಳಲು. ನಕಲಿ ದಾಖಲೆ, ಪಾಸ್ ಪೋರ್ಟ್ ತಯಾರಿಸಲು ಸಹಕರಿಸಿದ ಮತ್ತು ಸಂಪರ್ಕದಲ್ಲಿದ್ದ ವ್ಯಕ್ತಿಗಳನ್ನು ಪತ್ತೆಮಾಡಿ ತನಿಖೆಗೆ ಪೊಲೀಸರು ಮುಂದಾಗಿದ್ದಾರೆ. ಒಟ್ಟಾರೆ ಕ್ರೈಂ ಮಾಡಿ ಪರಾರಿಯಾಗಿರುವ ಆರೋಪಿಗಳಿಗೆ ಮಂಗಳೂರು ಪೊಲೀಸರು ಬಿಸಿ ಮುಟ್ಟಿಸುತ್ತಿದ್ದಾರೆ.

- Advertisement -

Latest News

error: Content is protected !!