Friday, May 17, 2024
Homeಅಪರಾಧಮಂಗಳೂರು;  ಸಿಸಿಬಿ ಪೊಲೀಸರ ಕಾರ್ಯಾಚರಣೆ: ಮನೆ ಕಳ್ಳತನ ಪ್ರಕರಣದ ಇಬ್ಬರು ಆರೋಪಿಗಳ ಬಂಧನ; 1 ಕೆಜಿ...

ಮಂಗಳೂರು;  ಸಿಸಿಬಿ ಪೊಲೀಸರ ಕಾರ್ಯಾಚರಣೆ: ಮನೆ ಕಳ್ಳತನ ಪ್ರಕರಣದ ಇಬ್ಬರು ಆರೋಪಿಗಳ ಬಂಧನ; 1 ಕೆಜಿ ಚಿನ್ನಾಭರಣ ವಶ

spot_img
- Advertisement -
- Advertisement -

ಮಂಗಳೂರು ನಗರದ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆ ಕಳ್ಳತನ ಪ್ರಕರಣದಲ್ಲಿನ ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿ ಅವರಿಂದ 1 ಕೆ ಜಿ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ.

ದಿನಾಂಕ: 15-01-2023 ರಂದು ಸಂಜೆ 6-30 ರಿಂದ ದಿನಾಂಕ: 16-01-2023 ರಂದು ಬೆಳಿಗ್ಗೆ 09:00 ಗಂಟೆಯ ಮಧ್ಯದಲ್ಲಿ  ಮಂಗಳೂರು ತಾಲೂಕು ತಾಳಿಪ್ಪಾಡಿ ಗ್ರಾಮದ ಗುತ್ತಕಾಡು ಎಂಬಲ್ಲಿರುವ ಐಕಳ ಹರೀಶ್ ಶೆಟ್ಟಿ ಎಂಬವರ ಚಂದ್ರಿಕಾ ಎಂಬ ಹೆಸರಿನ ಮನೆಯ ಎದುರಿನ ಬಾಗಿಲಿನ ಲಾಕನ್ನು ಯಾರೋ ಕಳ್ಳರು ಮುರಿದು ಮನೆಯಲ್ಲಿದ್ದ ಚಿನ್ನಾಭರಣ, ಬೆಳ್ಳಿಯ ಆಭರಣ ಹಾಗೂ ನಗದು ಹಣವನ್ನು ಕಳವುಗೈದಿದ್ದರು. ಈ ಬಗ್ಗೆ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ತನಿಖೆಯನ್ನು ನಗರ ಅಪರಾಧ ವಿಭಾಗ(ಸಿಸಿಬಿ) ಕ್ಕೆ ಹಸ್ತಾಂತರಿಸಲಾಗಿತ್ತು.

ಈ ಕ್ಷಿಷ್ಟಕರವಾದ ಹಾಗೂ ಯಾವುದೇ ಸುಳಿವು ಇಲ್ಲದ ಪ್ರಕರಣದ ತನಿಖೆಯನ್ನು ಕೈಗೊಂಡ ಮಂಗಳೂರು ಸಿಸಿಬಿ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆಯನ್ನು ಕೈಗೊಂಡು ಮಾಹಿತಿಯನ್ನು ಸಂಗ್ರಹಿಸಿ ಚಾಣಕ್ಷತನದಿಂದ ಪ್ರಕರಣವನ್ನು ಭೇದಿಸಿ ಈ ಪ್ರಕರಣದಲ್ಲಿ ಭಾಗಿಯಾದ ಕಾರ್ಕಳದ ಮಾಳದ ದರ್ಖಾಸು ಎಂಬಲ್ಲಿನ  ಗಣೇಶ ನಾಯ್ಕ್(26) ಹಾಗೂ ಕೊಡಗಿನ ವಿರಾಜಪೇಟೆ ತಾಲೂಕಿನ ಹಳೇ ಸಿದ್ದಾಪುರದ ರಂಜಿತ್ ಕೆ.ಆರ್(26) ಎಂಬಾತನನ್ನು ಬಂಧಿಸಿದ್ದಾರೆ.

ಆರೋಪಿಗಳಿಂದ 1 ಕೆಜಿ ವಿವಿಧ ನಮೂನೆಯ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಚಿನ್ನಾಭರಣಗಳ ಒಟ್ಟು ಮೌಲ್ಯ ರೂ. 55 ಲಕ್ಷ ಎಂದು ಅಂದಾಜಿಸಲಾಗಿದೆ. ಅಲ್ಲದೇ ಆರೋಪಿಗಳಿಂದ  2 ಮೊಬೈಲ್ ಫೋನ್ ಗಳು, ಕೃತ್ಯಕ್ಕೆ ಬಳಸಿದ ಕಬ್ಬಿಣದ ರಾಡ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ ರೂ. 56,50,000/-ಎನ್ನಲಾಗಿದೆ.  ಪ್ರಕರಣದಲ್ಲಿ ಇನ್ನೂ ಹಲವಾರು ಮಂದಿ ಆರೋಪಿಗಳು ಭಾಗಿಯಾಗಿದ್ದು, ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿದೆ.

ಈ ಆರೋಪಿಗಳ ಪೈಕಿ ಗಣೇಶ್ ನಾಯ್ಕ್ ಹಾಗೂ ಇತರ ಇಬ್ಬರು ಆರೋಪಿಗಳು ಈ ಹಿಂದೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕೆಳರಾಯಿ ಚರ್ಚ್ ರಸ್ತೆಯಲ್ಲಿನ ಮನೆಯೊಂದರ ಬಾಗಿಲಿನ ಬೀಗವನ್ನು ಒಡೆದು ಮನೆಯಲ್ಲಿನ ಬೆಲೆಬಾಳುವ ಸೊತ್ತುಗಳನ್ನು ಹಾಗೂ ಮಾರುತಿ ಬ್ರೀಝಾ ಕಾರನ್ನು ಕಳವುಗೈದ ಪ್ರಕರಣದಲ್ಲಿ ಭಾಗಿಯಾಗಿದ್ದು, ಈ ಪ್ರಕರಣವು ಕೂಡಾ ಪತ್ತೆಯಾಗಿರುತ್ತದೆ.               ಆರೋಪಿಗಳ ಪೈಕಿ ಗಣೇಶ್ ನಾಯ್ಕ್ ಎಂಬಾತನ ವಿರುದ್ಧ ಈ ಹಿಂದೆ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿರುತ್ತದೆ.

ಈ ಕಳವು ಪ್ರಕರಣವನ್ನು ಭೇದಿಸುವಲ್ಲಿ ಮಂಗಳೂರು ನಗರ ಸಿಸಿಬಿ ಘಟಕದ ಎಸಿಪಿ ಪಿ ಎ ಹೆಗಡೆ, ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್ ಎಂ, ಪಿಎಸ್ಐಯವರಾದ ರಾಜೇಂದ್ರ ಬಿ,ಸುದೀಪ್ ಎಂ ವಿ, ಶರಣಪ್ಪ ಭಂಡಾರಿ, ಎಎಸ್ಐಯವರಾದ ಶಶಿಧರ ಶೆಟ್ಟಿ, ಹರೀಶ್,ಮೋಹನ್ ಕೆ ವಿ  ಹಾಗೂ ಸಿಸಿಬಿ ಸಿಬ್ಬಂದಿಯವರು ಪಾಲ್ಗೊಂಡಿದ್ದರು.

- Advertisement -
spot_img

Latest News

error: Content is protected !!