Thursday, June 4, 2026
Homeಕರಾವಳಿಸೌದಿ ಅರೇಬಿಯಾದಲ್ಲಿ ನಡೆದ ಅಪಘಾತದಲ್ಲಿ ಮಂಗಳೂರಿನ ವ್ಯಕ್ತಿ ಸಾವು

ಸೌದಿ ಅರೇಬಿಯಾದಲ್ಲಿ ನಡೆದ ಅಪಘಾತದಲ್ಲಿ ಮಂಗಳೂರಿನ ವ್ಯಕ್ತಿ ಸಾವು

- Advertisement -
- Advertisement -

ಮಂಗಳೂರು: ಸೌದಿ ಅರೇಬಿಯಾದ ಜುಬೈಲ್ ಎಂಬಲ್ಲಿ  ಸಂಭವಿಸಿದ ರಸ್ತೆ ಅಪಘಾತದಲ್ಲಿ ಮಂಗಳೂರು ತಾಲೂಕಿನ ಮಲ್ಲೂರು ನಿವಾಸಿ ಸುಲೈಮಾನ್ (35) ಎಂಬವರು ಸಾವನ್ನಪ್ಪಿದ್ದಾರೆ.

ಸುಲೈಮಾನ್ ರಸ್ತೆ ದಾಟುತ್ತಿದ್ದ ವೇಳೆ ವಾಹನ ಢಿಕ್ಕಿಯಾಗಿ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಮಲ್ಲೂರು ಪಲ್ಲಿಬೆಟ್ಟು ಅಬೂಬಕರ್ ಎಂಬವರ ಪುತ್ರ ಸುಲೈಮಾನ್‌ ಅವರು ಜುಬೈಲ್‌ನ ಲುಮಿನಾಸ್ ಕಂಪೆನಿಯ ಉದ್ಯೋಗಿಯಾಗಿದ್ದರು. ಇಬ್ಬರು ಮಕ್ಕಳ ತಂದೆಯಾಗಿರುವ ಸುಲೈಮಾನ್ ಅವರು ಏಪ್ರಿಲ್ 20ರಂದು ಊರಿಗೆ ಬರುವವರಿದ್ದರು ಎನ್ನಲಾಗಿದೆ.

- Advertisement -

Latest News

error: Content is protected !!