Thursday, June 4, 2026
Homeತಾಜಾ ಸುದ್ದಿಬೆಂಗಳೂರಿನಲ್ಲಿ ಮಂಗಳೂರು ಮೂಲದ ವೃದ್ಧ ದಂಪತಿಯ ಬರ್ಬರ ಹತ್ಯೆ

ಬೆಂಗಳೂರಿನಲ್ಲಿ ಮಂಗಳೂರು ಮೂಲದ ವೃದ್ಧ ದಂಪತಿಯ ಬರ್ಬರ ಹತ್ಯೆ

- Advertisement -
- Advertisement -

ಬೆಂಗಳೂರು: ಮಂಗಳೂರು ಮೂದ ವೃದ್ಧ ದಂಪತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕೊಡಿಗೇಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ. ಬೆಳಗ್ಗೆ 11 ಗಂಟೆ ವೇಳೆಗೆ ಘಟನೆ ಬೆಳಕಿಗೆ ಬಂದಿದೆ.  

ಸುಮಾರು 20 ವರ್ಷಗಳ ಹಿಂದೆ ವೃದ್ಧ ದಂಪತಿ ಸೈಟ್ ಖರೀದಿಸಿ ವಾಸವಿದ್ದರು. ಇವರಿಗೆ ಇಬ್ಬರು ಮಕ್ಕಳಿದ್ದು, ಹಿರಿಯ ಮಗ ತಿಂಡ್ಲು ಗ್ರಾಮದಲ್ಲಿ ವಾಸವಿದ್ದಾರೆ. ಕಿರಿಯ ಮಗ ತಂದೆ-ತಾಯಿ ಜತೆ ಇದ್ದನು. ಕೊಲೆ ನಡೆದ ಬಳಿಕ ಕಿರಿಯ ಮಗ ಮನೆಯಲ್ಲಿ ಕಾಣಿಸುತ್ತಿಲ್ಲ ಎಂದು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಘಟನಾ ಸ್ಥಳಕ್ಕೆ ಈಶಾನ್ಯ ವಿಭಾಗದ ಡಿಸಿಪಿ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.

- Advertisement -

Latest News

error: Content is protected !!