Sunday, April 28, 2024
Homeಕರಾವಳಿ5 ನಿಮಿಷ ಭಾಷಣ ಮಾಡಿ ಸಾಮಾಜಿಕ‌ ಜಾಲತಾಣದಲ್ಲಿ ವೈರಲ್ ಸ್ಟಾರ್ ಆದ ಮಂಗಳೂರಿನ ಪೋರ

5 ನಿಮಿಷ ಭಾಷಣ ಮಾಡಿ ಸಾಮಾಜಿಕ‌ ಜಾಲತಾಣದಲ್ಲಿ ವೈರಲ್ ಸ್ಟಾರ್ ಆದ ಮಂಗಳೂರಿನ ಪೋರ

spot_img
- Advertisement -
- Advertisement -

ಮಂಗಳೂರು: ಇಲ್ಲಿನ ದೇರಳಕಟ್ಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಯೊಬ್ಬ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಮಾಡಿದ ಭಾಷಣದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಬಾಲಕನ ಮಾತು ಕೇಳಿ ಜನ ಬಿದ್ದು ಬಿದ್ದು ನಗುತ್ತಿದ್ದಾರೆ.

ಆ.23ರಂದು ದೇರಳಕಟ್ಟೆ ಪಬ್ಲಿಕ್ ಸ್ಕೂಲ್‌ನಲ್ಲಿ ದೇರಳಕಟ್ಟೆ ವಲಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿದ್ದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ದೇರಳಕಟ್ಟೆ ಶಾಲೆಯ 7ನೇ ತರಗತಿ ವಿದ್ಯಾರ್ಥಿ ಮಹಮ್ಮದ್ ಅಫ್ವಾನ್ ಹಾಸ್ಯಭರಿತ‌‌ ಭಾಷಣ ವೈರಲ್‌ ಆಗಿದೆ.

ತರಗತಿಯಲ್ಲಿ ಕುಳಿತು ಮಾತನಾಡುತ್ತಿದ್ದಾಗ ಕೈ ಹಿಡಿದು ಎಬ್ಬಿಸಿದ ಶಿಕ್ಷಕಿ ಮುಂದೆ ನಿಂತು ಮಾತನಾಡುವಂತೆ ಹೇಳಿದ್ದಾರೆ. ಕುಳಿತು ಮಾತನಾಡಿದರೆ ಕೇಳೋದಿಲ್ಲ, ನಿಂತು ಮಾತನಾಡು ಅಂದಿದ್ದಾರೆ. ಅದಕ್ಕಾಗಿ ಪ್ರತಿಭಾ ಕಾರಂಜಿಯ ಭಾಷಣದಲ್ಲಿ ಮಾತನಾಡುತ್ತಿದ್ದೇನೆ ಎಂದು ಬೇರೆ ಘಟನೆಗಳನ್ನು  ಹಾಸ್ಯಭರಿತವಾಗಿ ಹೇಳಿದ್ದಾನೆ. ಅಫ್ವಾನ್ ಮಾತಿಗೆ ಇಡೀ ಸಭೆ ನಗೆಗಡಲಲ್ಲಿ ತೇಲಿತ್ತು. ಈತನ ಮಾತುಗಳನ್ನು ಶಿಕ್ಷಕಿಯೊಬ್ಬರು ಮೊಬೈಲ್ ಮೂಲಕ ಚಿತ್ರೀಕರಿಸಿದ್ದು, ಸೋಷಿಯಲ್‌ ಮೀಡಿಯಾದಲ್ಲಿ‌ ವೈರಲ್‌ ಆಗಿದೆ. ಅನೇಕರು ಆತ ಭವಿಷ್ಯದಲ್ಲಿ‌ ರಾಜಕಾರಣಿಯಾಗುತ್ತಾನೆ ಎಂದು ಕಮೆಂಟ್ ಮಾಡಿದ್ದಾರೆ.

‘ಸರ್ಕಾರಿ ಶಾಲೆಯ ಮಕ್ಕಳು ಪ್ರತಿಭಾವಂತರು. ವೇದಿಕೆಗೆ ಅಂಜದೆ ಮಾತನಾಡಬೇಕೆಂದು ಎಲ್ಲಾ ವಿದ್ಯಾರ್ಥಿಗಳಿಗೆ ಹೇಳುತ್ತಾ ಬಂದಿದ್ದೇನೆ. ಯಾವುದೇ ವಿಷಯದ ಮೇಲಿನ ಭಾಷಣ ಅವರೊಳಗಿನ ಪ್ರತಿಭೆಯನ್ನು ಹೊರತರುವುದಿಲ್ಲ. ಅವರೊಳಗಿನ ಮಾತುಗಳು ಅಂಜಿಕೆಯಿಲ್ಲದೆ ಹೊರಬಂದಾಗ ಪ್ರತಿಭೆ ಅನ್ವೇಷಣೆ ಸಾಧ್ಯ. ಅದಕ್ಕಾಗಿ ಮೂವರು ವಿದ್ಯಾರ್ಥಿಗಳಿಗೆ ಅವಕಾಶ ಕೊಟ್ಟಿದ್ದೆವು. ಅದರಲ್ಲಿ ಅಫ್ವಾನ್ ದ್ವಿತೀಯ ಸ್ಥಾನವನ್ನು ಗಳಿಸಿದ್ದಾನೆ’ ಎಂದು ದೇರಳಕಟ್ಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕಿ ಆಲಿಸ ವಿಮಲಾ ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!