Friday, June 5, 2026
Homeಕರಾವಳಿಉಡುಪಿಕಿಶೋರ್ ಶೆಟ್ಟಿಯನ್ನು ಬಂಧಿಸಿದ್ದೇ ಮುಳುವಾಯ್ತಾ? ಮಂಗಳೂರು ಸಿಸಿಬಿ ಇನ್ಸ್ ಪೆಕ್ಟರ್ ಶಿವಪ್ರಕಾಶ್ ನಾಯ್ಕ್ ದಿಢೀರ್ ವರ್ಗಾವಣೆ

ಕಿಶೋರ್ ಶೆಟ್ಟಿಯನ್ನು ಬಂಧಿಸಿದ್ದೇ ಮುಳುವಾಯ್ತಾ? ಮಂಗಳೂರು ಸಿಸಿಬಿ ಇನ್ಸ್ ಪೆಕ್ಟರ್ ಶಿವಪ್ರಕಾಶ್ ನಾಯ್ಕ್ ದಿಢೀರ್ ವರ್ಗಾವಣೆ

- Advertisement -
- Advertisement -

ಮಂಗಳೂರು : ರಾಜ್ಯದಲ್ಲಿ ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ ದಿನಕ್ಕೊಂದು ರೀತಿ ಟ್ವಿಸ್ಟ್ ಪಡೆದುಕೊಳ್ಳುತ್ತಿದೆ. ಪ್ರಕರಣದಲ್ಲಿ ಒಂದೊಂದೇ ಹೆಸರುಗಳು ಹೊರಗೆ ಬರುತ್ತಿವೆ. ಹೀಗಿರುವಾಗಲೇ ಮಂಗಳೂರಿನಲ್ಲಿ ಅಚ್ಚರಿಯ ಬೆಳವಣಿಗೆಯೊಂದು ನಡೆದಿದೆ.

ಮಂಗಳೂರಿನಲ್ಲಿ ಡ್ರಗ್ಸ್ ಪ್ರಕರಣದ ತನಿಖೆ ನಡೆಸುತ್ತಿದ್ದಂತ ಸಿಸಿಬಿ ಇನ್ಸ್ ಪೆಕ್ಟರ್ ಅನ್ನು ದಿಢೀರ್ ವರ್ಗಾವಣೆ ಮಾಡಲಾಗಿದೆ. ಇದು ಹಲವಾರು ಅನುಮಾನಗಳಿಗೆ ಕಾರಣವಾಗಿದೆ. ಇನ್ಸ್ ಪೆಕ್ಟರ್ ಶಿವಪ್ರಕಾಶ್ ಅವರನ್ನು ವರ್ಗಾವಣೆ ಮಾಡಿರುವ ರಾಜ್ಯ ಸರ್ಕಾರ, ಅವರ ಸ್ಥಾನಕ್ಕೆ ಉಡುಪಿಯ ಕಾಪು ಠಾಣೆಯ ಸಿಐ ಮಹೇಶ್ ಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ.

ಅಂದಹಾಗೇ, ಸಿಸಿಬಿ ಇನ್ಸ್ ಪೆಕ್ಟರ್ ಶಿವ ಪ್ರಕಾಶ್ ನಾಯ್ಕ್ ಅವರ ವರ್ಗಾವಣೆಯ ಹಿಂದೆ, ಡ್ರಗ್ಸ್ ಪೆಡ್ಲರ್ ಕಿಶೋರ್ ಅವರನ್ನು ಬಂಧಿಸಿದ್ದೇ ಕಾರಣ ಎನ್ನಲಾಗುತ್ತಿದೆ. ಇದೇ ಒತ್ತಡದಿಂದಾಗಿಯೇ ಮಂಗಳೂರು ಸಿಸಿಬಿ ಇನ್ಸ್ ಪೆಕ್ಟರ್ ಅವರನ್ನು ದಿಢೀರ್ ವರ್ಗಾವಣೆ ಮಾಡಲಾಗಿದೆ ಎನ್ನಲಾಗುತ್ತಿದೆ.

- Advertisement -

Latest News

error: Content is protected !!