Friday, June 5, 2026
Homeಕರಾವಳಿಮಂಗಳೂರು; ಗೋವಾದಿಂದ ಮಾದಕ ವಸ್ತು ತಂದು ಮಾರಾಟ ಮಾಡುತ್ತಿದ್ದ ಮೂವರ ಬಂಧನ

ಮಂಗಳೂರು; ಗೋವಾದಿಂದ ಮಾದಕ ವಸ್ತು ತಂದು ಮಾರಾಟ ಮಾಡುತ್ತಿದ್ದ ಮೂವರ ಬಂಧನ

- Advertisement -
- Advertisement -

ಮಂಗಳೂರು; ಗೋವಾದಿಂದ ಮಾದಕ ವಸ್ತು ತಂದು ಮಾರಾಟ ಮಾಡುತ್ತಿದ್ದ ಮೂವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.  ಮಂಗಳೂರು ಕೃಷ್ಣಾಪುರ ನಿವಾಸಿ ಮಹಮ್ಮದ್ ನಿಯಾಜ್ (28), ತಲಪಾಡಿಯ ನಿಷಾದ್ (31), ಮಹಮ್ಮದ್ ರಝೀನ್ (24) ಬಂಧಿತರು.
ಆರೋಪಿಗಳು ಉಳ್ಳಾಲ ತಾಲೂಕು ತಲಪಾಡಿ ಗ್ರಾಮದ ಪಿಲಿರೂರು ಎಂಬಲ್ಲಿ ಎರಡು ಕಾರಿನಲ್ಲಿ ಬಂದು ಮಾದಕ ವಸ್ತುವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದಾಗ  ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಸಿಸಿಬಿ ಪೊಲೀಸರು ಒಟ್ಟು 180 ಗ್ರಾಂ ತೂಕದ ₹9ಲಕ್ಷ ಮೌಲ್ಯದ ಎಂಡಿಎಂಎ ಮಾದಕ ವಸ್ತು ವಶಪಡಿಸಿಕೊಂಡಿದ್ದಾರೆ ಎಂದು ನಗರ ಪೊಲೀಸ್ ಕಮಿಷನರ್ ಕುಲದೀಪ ಕುಮಾರ್ ಜೈನ್ ತಿಳಿಸಿದ್ದಾರೆ.

- Advertisement -

Latest News

error: Content is protected !!