Thursday, June 4, 2026
Homeಕರಾವಳಿಮಂಗಳೂರು; ಹೈ ಪ್ರೊಫೈಲ್ ಗಾಂಜಾ ಪ್ರಕರಣ; 23 ಮಂದಿಗೆ ಜಾಮೀನು ಮಂಜೂರು

ಮಂಗಳೂರು; ಹೈ ಪ್ರೊಫೈಲ್ ಗಾಂಜಾ ಪ್ರಕರಣ; 23 ಮಂದಿಗೆ ಜಾಮೀನು ಮಂಜೂರು

- Advertisement -
- Advertisement -

ಮಂಗಳೂರು : ಹೈಪ್ರೊಫೈಲ್ ಗಾಂಜಾ ಪ್ರಕರಣಕ್ಕೆ ಸಂಬಂಧಿಸಿದಂತೆ 23 ಆರೋಪಿಗಳಿಗೆ ಜಾಮೀನು ದೊರಕಿದೆ. ನಾಲ್ವರು ವೈದ್ಯರು ಮತ್ತು 19 ವೈದ್ಯಕೀಯ ವಿದ್ಯಾರ್ಥಿಗಳಿಗೆ ಕೋರ್ಟ್ ಜಾಮೀನು ನೀಡಿದೆ.  

ಪ್ರಕರಣಕ್ಕೆ ಸಂಬಂಧಿಸದಂತೆ ವೈದ್ಯರು ಮತ್ತು ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 24 ಮಂದಿಯನ್ನು ಬಂಧಿಸಲಾಗಿತ್ತು. ಈ ಪೈಕಿ ವೈದ್ಯಕೀಯ (ಬಿಡಿಎಸ್) ವಿದ್ಯಾರ್ಥಿ ಸಾಗರೋತ್ತರ ಭಾರತೀಯ ಪ್ರಜೆ ಯುನೈಟೆಡ್ ಕಿಂಗ್ಡಮ್ನ ನೀಲ್ ಕಿಶೋರಿಲಾಲ್ ರಾಮ್ ಜಿ ಶಾ (38) ಹೊರತುಪಡಿಸಿ ಉಳಿದವರಿಗೆ ಮಂಗಳೂರಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

13 ಮಂದಿಗೆ ಇತ್ತೀಚೆಗೆ ಜಾಮೀನು ಮಂಜೂರಾಗಿತ್ತು. ಮಂಗಳವಾರ 10 ಮಂದಿ ಆರೋಪಿಗಳಿಗೆ ಜಾಮೀನು ಮಂಜೂರಾಗಿದೆ. ನೀಲ್ ಕಿಶೋರಿಲಾಲ್ ರಾಮ್ ಜಿ ಶಾ ಈ ಪ್ರಕರಣದ ಪ್ರಮುಖ ಆರೋಪಿಯಾಗಿದ್ದು, ನ್ಯಾಯಾಂಗ ಬಂಧನದಲ್ಲಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

- Advertisement -

Latest News

error: Content is protected !!