Sunday, June 7, 2026
Homeತಾಜಾ ಸುದ್ದಿನಾಯಿಗೆ ಕೃಷ್ಣ ವೇಷ ಹಾಕಿದ ಅನ್ಯಧರ್ಮೀಯ ಯುವತಿ, ವಿವಾದವಾಗುತ್ತಿದ್ದಂತೆ ಪೋಸ್ಟ್ ಡಿಲೀಟ್

ನಾಯಿಗೆ ಕೃಷ್ಣ ವೇಷ ಹಾಕಿದ ಅನ್ಯಧರ್ಮೀಯ ಯುವತಿ, ವಿವಾದವಾಗುತ್ತಿದ್ದಂತೆ ಪೋಸ್ಟ್ ಡಿಲೀಟ್

- Advertisement -
- Advertisement -

ಮಂಗಳೂರು: ತಮ್ಮ ಮುದ್ದಿನ ನಾಯಿಗೆ ಕೃಷ್ಣನ ವೇಷ ತೊಡಿಸಿ, ಆ ಚಿತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಮಾಡೆಲ್ ಆಗಿರುವ ಅವರು ನಾಯಿಗೆ ಕೃಷ್ಣನ ವೇಷ ಹಾಕಿರುವುದಕ್ಕೆ ಭಾರೀ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಆ ಪೋಸ್ಟ್​ಅನ್ನು ಡಿಲಿಟ್ ಮಾಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಕ್ರಿಶ್ಚಿಯನ್ ಧರ್ಮಕ್ಕೆ ಸೇರಿದವರು ಎನ್ನಲಾದ ಈ ಯುವತಿ ಮಂಗಳೂರಿನವರಾಗಿದ್ದು, ಪ್ರಸ್ತುತ ಬೆಂಗಳೂರಿನಲ್ಲಿ ವಾಸವಾಗಿದ್ದಾರೆ ಎಂದು ತಿಳಿದುಬಂದಿದೆ. ನಾಯಿಮರಿಗೆ ಕೃಷ್ಣ ವೇಷ ಹಾಕಿ ಶ್ರೀಕೃಷ್ಣ ಜನ್ಮಾಷ್ಟಮಿಯ ಶುಭಾಶಯ ಕೋರಿದ್ದರು. ಅನೇಕರು ಲೈಕ್ಸ್‌ಗಳನ್ನು ಹಾಕಿದ್ದರೆ, ಇನ್ನೂ ಕೆಲವರು ಆಕ್ಷೇಪ ವ್ಯಕ್ತಪಡಿಸಿದ್ದರು ಎಂದು ಹೇಳಲಾಗಿದೆ.

ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಹಿಂದುಗಳೆಲ್ಲ ತಮ್ಮ ಮಕ್ಕಳಿಗೆ ಕೃಷ್ಣನ ವೇಷ ಹಾಕಿ, ಆ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಅದರಂತೆ ಮಂಗಳೂರು ಮೂಲದ ಮಾಡೆಲಿಂಗ್ ಕ್ಷೇತ್ರದಲ್ಲಿರುವ ಯುವತಿ ತನ್ನ ನಾಯಿ ಮರಿಗೆ ಕೃಷ್ಣನ ವೇಷ ಹಾಕಿದ್ದಾರೆ. ಬಳಿಕ ಆ ಚಿತ್ರವನ್ನು ತಮ್ಮ ಇನ್​ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೊಗಳು ಈಗ ಜಾಲತಾಣದಲ್ಲಿ ವೈರಲ್ ಆಗಿದ್ದು ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ.

- Advertisement -

Latest News

error: Content is protected !!