Thursday, June 4, 2026
Homeಕರಾವಳಿಮಂಗಳೂರು; ಬೈಕ್ ಸವಾರನ ನಿಯಂತ್ರಣ ತಪ್ಪಿ ಬೈಕ್ ಡಿವೈಡರ್ ಗೆ ಡಿಕ್ಕಿ; ಸಹ ಸವಾರೆ ಮೃತ್ಯು

ಮಂಗಳೂರು; ಬೈಕ್ ಸವಾರನ ನಿಯಂತ್ರಣ ತಪ್ಪಿ ಬೈಕ್ ಡಿವೈಡರ್ ಗೆ ಡಿಕ್ಕಿ; ಸಹ ಸವಾರೆ ಮೃತ್ಯು

- Advertisement -
- Advertisement -

Manglore; Lady died in an Accident in Ullal ಮಂಗಳೂರು; ಬೈಕ್ ಸವಾರನ ನಿಯಂತ್ರಣ ತಪ್ಪಿ ಬೈಕ್ ಡಿವೈಡರ್ ಗೆ ಡಿಕ್ಕಿಯಾದ ಪರಿಣಾಮ ಸಹ ಸವಾರೆ ಸಾವನ್ನಪ್ಪಿರುವ ಘಟನೆ ಉಳ್ಳಾಲದ ನಾಟೆಕಲ್ ಬಳಿ ನಡೆದಿದೆ.ಮಂಗಳೂರು ನಗರದ ಬೋಂದೇಲ್ ನಿವಾಸಿ ಶ್ರೀನಿಧಿ (29) ಮೃತ ದುರ್ದೈವಿ.

ಬೈಕ್ ಸವಾರ ಯತೀಶ್ ದೇವಾಡಿಗ ಗಂಭೀರವಾಗಿ ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮುಡಿಪುವಿನಲ್ಲಿನ ಸಂಬಂಧಿಕರ ಗೃಹಪ್ರವೇಶಕ್ಕೆ ತೆರಳಿ ವಾಪಸ್ಸಾಗುವ ಸಂದರ್ಭ ಬೈಕ್, ಸವಾರನ ನಿಯಂತ್ರಣ ತಪ್ಪಿ ನಾಟೆಕಲ್ ಗ್ರೀನ್ ಗ್ರೌಂಡ್ ಸಮೀಪ ಡಿವೈಡರ್ ಗೆ ಬಡಿದಿದೆ. ಇನ್ನು ಮೃತ ಶ್ರೀನಿಧಿ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದರೆ, ಯತೀಶ್ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Latest News

error: Content is protected !!