Monday, May 13, 2024
Homeಕರಾವಳಿವಿವಾದಿತ ಪೋಸ್ಟ್ ಹಾಕಿ ಸೌದಿ ಅರೇಬಿಯಾದಲ್ಲಿ ಬಂಧನಕ್ಕೊಳಗಾಗಿದ್ದ ಮಂಗಳೂರಿನ ವ್ಯಕ್ತಿ ಬಿಡುಗಡೆ

ವಿವಾದಿತ ಪೋಸ್ಟ್ ಹಾಕಿ ಸೌದಿ ಅರೇಬಿಯಾದಲ್ಲಿ ಬಂಧನಕ್ಕೊಳಗಾಗಿದ್ದ ಮಂಗಳೂರಿನ ವ್ಯಕ್ತಿ ಬಿಡುಗಡೆ

spot_img
- Advertisement -
- Advertisement -

ಮಂಗಳೂರು: ವಿವಾದಿತ ಫೇಸ್‍ಬುಕ್ ಪೋಸ್ಟ್ ಗೆ ಸಂಬಂಧಿಸಿದಂತೆ ಸೌದಿ ಅರೇಬಿಯಾದಲ್ಲಿ ಬಂಧನಕ್ಕೊಳಗಾಗಿದ್ದ ಮಂಗಳೂರಿನ ಕೋಟೇಶ್ವರ ಬೀಜಾಡಿ ಗ್ರಾಮದ ನಿವಾಸಿ ಹರೀಶ್‌ ಬಂಗೇರ ಎಸ್‌. ಅವರು ಜೈಲಿನಿಂದ ಬಿಡುಗಡೆಯಾಗಿದ್ದಾರೆ.

ಈ ಬಗ್ಗೆ ಮಂಗಳೂರು ಅಸೋಸಿಯೇಷನ್ ಸೌದಿ ಅರೇಬಿಯಾ(MASA) ಇದರ ಅಧ್ಯಕ್ಷರಾದ ಸತೀಶ್ ಕುಮಾರ್ ಬಜಾಲ್ ಮಾಹಿತಿ ನೀಡಿದ್ದಾರೆ. ಶೀಘ್ರದಲ್ಲೇ ಹರೀಶ್ ಬಂಗೇರ ರವರು ತಾಯ್ನಾಡಿಗೆ ಮರಳಲಿದ್ದಾರೆ ಎಂದಿದ್ದಾರೆ. ಇವರ ವಿಮಾನ ಪ್ರಯಾಣದ ವೆಚ್ಚವನ್ನು ಕೂಡಾ ಮಂಗಳೂರು ಅಸೋಸಿಯೇಷನ್ ನ ಪರವಾಗಿ ಜೈಲಾಧಿಕಾರಿಗಳಿಗೆ ನೀಡಲಾಗಿದೆ. ಇವರ ಬಿಡುಗಡೆಯ ಎಲ್ಲಾ ದಾಖಲೆ ಪತ್ರಗಳು ಪೂರ್ಣವಾಗಿದ್ದು ಅವರು ಭಾರತ ಪ್ರಯಾಣದ ಸಿದ್ದತೆಯ ಕೊನೆಯ ಹಂತದಲ್ಲಿದ್ದಾರೆ ಎಂದು ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!