Sunday, May 5, 2024
Homeಕರಾವಳಿಮಂಗಳೂರು; ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಲಂಚ ಆರೋಪ ಸಾಬೀತು; ಮನಪಾ ಅಧಿಕಾರಿಗೆ 1 ಕೋಟಿ...

ಮಂಗಳೂರು; ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಲಂಚ ಆರೋಪ ಸಾಬೀತು; ಮನಪಾ ಅಧಿಕಾರಿಗೆ 1 ಕೋಟಿ ರೂಪಾಯಿ ದಂಡ, 4 ವರ್ಷಗಳ ಸಾದಾ ಶಿಕ್ಷೆ

spot_img
- Advertisement -
- Advertisement -

ಮಂಗಳೂರು: ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಲಂಚ ಆರೋಪ ಪ್ರಕರಣ ಸಾಬೀತಾದ ಹಿನ್ನೆಲೆ ಮಂಗಳೂರು ಮಹಾನಗರ ಪಾಲಿಕೆಯ ಅಧಿಕಾರಿ ಶಿವಲಿಂಗ ಕೊಂಡಗುಳಿ ಅವರಿಗೆ 1 ಕೋಟಿ ರೂ. ದಂಡ, ನಾಲ್ಕು ವರ್ಷಗಳ ಸಾದಾ ಶಿಕ್ಷೆ ವಿಧಿಸಿ 3ನೆ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.

ಆರೋಪಿ ಶಿವಲಿಂಗ ಕೊಂಡಗುಳಿ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿದ್ದಾರೆಂಬ ಮಾಹಿತಿ ಮೇರೆಗೆ 2013ರ ಫೆಬ್ರವರಿ 15ರಂದು ಮಂಗಳೂರು ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದರು.

ಜಿಲ್ಲಾ ಸತ್ರ ನ್ಯಾಯಾಲಯ ಈ ಪ್ರಕರಣದ ವಿಚಾರಣೆ ನಡೆಸಿದ್ದು, ನ್ಯಾಯಾಧೀಶ ಬಿ.ಬಿ. ಜಕಾತಿ ಇಂದು ಅಂತಿಮ ತೀರ್ಪು ನೀಡಿದ್ದಾರೆ. ಆರೋಪಿ ವಿರುದ್ಧ ಕಲಂ 13(1) (ಇ) ಜತೆಗೆ 13(2) ಲಂಚ ನಿರೋಧ ಕಾಯ್ದೆ 1988ರಂತೆ ಶಿಕ್ಷೆ ವಿಧಿಸಿ ತೀರ್ಪು ನೀಡಲಾಗಿದೆ. ಆರೋಪಿ ದಂಡ ಕಟ್ಟಲು ವಿಫಲನಾದಲ್ಲಿ ಮತ್ತೆ 1 ವರ್ಷ ಸಾದಾ ಸಜೆಗೆ ಆದೇಶಿಸಿ ಅಂತಿಮ ತೀರ್ಪು ನೀಡಲಾಗಿದೆ.

ಹಾಲಿ ಶಿವಾನಂದ ಕುಂಡಗುಳಿ ಹಿರಿಯ ನೈರ್ಮಲ್ಯ ನಿರೀಕ್ಷರಾಗಿ ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಕರ್ತವ್ಯದಲ್ಲಿದ್ದಾರೆ. ಪ್ರಕರಣದಲ್ಲಿ ಲೋಕಾಯುಕ್ತ ಮಂಗಳೂರು ಪೊಲೀಸ್ ಉಪಧೀಕ್ಷಕರಾದ ಉಮೇಶ್ ಜಿ. ಶೇಟ್ ಸಮಗ್ರ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಮಂಗಳೂರು ಲೋಕಾಯುಕ್ತದ ವಿಶೇಷ ಸಾರ್ವಜನಿಕ ಅಭಿಯೋಜಕ ರವೀಂದ್ರ ಮುನ್ನಿಪಾಡಿ ಸರಕಾರದ ಪರವಾಗಿ ವಾದ ಮಂಡಿಸಿದ್ದರು.

- Advertisement -
spot_img

Latest News

error: Content is protected !!