- Advertisement -
![]()
- Advertisement -
ಮಂಗಳೂರು: ಕರ್ತವ್ಯ ನಿರತರಾಗಿದ್ದ ಪೊಲೀಸ್ ಸಿಬ್ಬಂದಿ ಮೇಲೆ ಬೈಕ್ ನಲ್ಲಿ ಬಂದ ಕಿಡಿಗೇಡಿಗಳು ಹಲ್ಲೆ ಮಾಡಿರುವ ಘಟನೆ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕೊಡಿಕಲ್ ಉರ್ವ ಬಳಿಯ ನಾರಾಯಣ ಗುರು ಕೋ-ಆಪರೇಟಿವ್ ಸೊಸೈಟಿ ಬಳಿ ಈ ಕೃತ್ಯ ನಡೆದಿದ್ದು, ಸದ್ಯ ಉರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾತ್ರಿ ಸುಮಾರು 2:00 ಗಂಟೆಯ ಸುಮಾರಿಗೆ ಉರ್ವ ಠಾಣೆಯ ಪೊಲೀಸ್ ಸಿಬ್ಬಂದಿ ಎಂದಿನಂತೆ ನೈಟ್ ರೌಂಡ್ಸ್ ಕರ್ತವ್ಯದಲ್ಲಿದ್ದರು. ಈ ವೇಳೆ ಅನುಮಾನಾಸ್ಪದವಾಗಿ ಬಂದ ದ್ವಿಚಕ್ರ ವಾಹನವೊಂದನ್ನು ತಪಾಸಣೆಗಾಗಿ ತಡೆಯಲು ಅವರು ಪ್ರಯತ್ನಿಸಿದ್ದಾರೆ. ಆದರೆ, ವಾಹನದಲ್ಲಿದ್ದ ಕಿಡಿಗೇಡಿಗಳು ಪೊಲೀಸರ ಮುನ್ನೆಚ್ಚರಿಕೆಯನ್ನು ನಿರ್ಲಕ್ಷಿಸಿ, ವಾಹನವನ್ನು ಅತ್ಯಂತ ಬೇಜವಾಬ್ದಾರಿಯಿಂದ ಹಾಗೂ ಅತಿವೇಗವಾಗಿ ಚಲಾಯಿಸಿ ಸ್ಥಳದಿಂದ ಪರಾರಿಯಾಗಿದ್ದಾರೆ.
- Advertisement -


