Thursday, June 4, 2026
Homeಕರಾವಳಿನಸುಕಿನ ಜಾವ ಮಂಗಳೂರು ಜಿಲ್ಲಾ ಕಾರಾಗೃಹಕ್ಕೆ ಮಂಗಳೂರು ಪೊಲೀಸರ ದಾಳಿ; ಏಕಕಾಲದಲ್ಲಿ 150ಕ್ಕೂ ಹೆಚ್ಚು ಪೊಲೀಸರಿಂದ...

ನಸುಕಿನ ಜಾವ ಮಂಗಳೂರು ಜಿಲ್ಲಾ ಕಾರಾಗೃಹಕ್ಕೆ ಮಂಗಳೂರು ಪೊಲೀಸರ ದಾಳಿ; ಏಕಕಾಲದಲ್ಲಿ 150ಕ್ಕೂ ಹೆಚ್ಚು ಪೊಲೀಸರಿಂದ ರೇಡ್

- Advertisement -
- Advertisement -

ಮಂಗಳೂರು: ನಸುಕಿನ ಜಾವ 4 ಗಂಟೆ ವೇಳೆಗೆ ಮಂಗಳೂರು ಜಿಲ್ಲಾ ಕಾರಾಗೃಹಕ್ಕೆ ಮಂಗಳೂರು ಪೊಲೀಸರ ದಾಳಿ ಮಾಡಿದ್ದಾರೆ. ದಾಳಿ ವೇಳೆ ಗಾಂಜಾ, ಡ್ರಗ್ಸ್, ಮೊಬೈಲ್​ ಫೋನ್​ಗಳನ್ನು ವಶಕ್ಕೆ ಪಡೆದಿದ್ದಾರೆ.ಇನ್ನು ಡ್ರಗ್ಸ್, ಗಾಂಜಾ ಪತ್ತೆಯ ಹಿನ್ನಲೆಯಲ್ಲಿ ತನಿಖೆಗೆ ಮಂಗಳೂರು ಪೊಲೀಸ್ ಕಮೀಷನರ್ ಆದೇಶ ಹೊರಡಿಸಿದ್ದಾರೆ.

ರೇಡ್ ವೇಳೆ  25 ಮೊಬೈಲ್, ಒಂದು ಬ್ಲೂ ಟೂತ್ ಡಿವೈಸ್, ಐದು ಇಯರ್ ಫೋನ್, ಒಂದು ಪೆನ್ ಡ್ರೈವ್, ಐದು ಚಾರ್ಜರ್, ಒಂದು ಕತ್ತರಿ ಸೇರಿದಂತೆ ವಿವಿಧ ವಸ್ತುಗಳು ಸಿಕ್ಕಿದ್ದು ಪೊಲೀಸರು ಆ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಜೊತೆಗೆ ಜೈಲು ಕೈದಿಗಳ ಜೊತೆಗಿದ್ದ ಗಾಂಜಾ ಮತ್ತು ಡ್ರಗ್ಸ್ ಪ್ಯಾಕೇಟ್​ಗಳನ್ನು ಕೂಡಾ ವಶಕ್ಕೆ ಪಡೆಯಲಾಗಿದೆ. ಮುಂಜಾನೆ ನಾಲ್ಕು ಗಂಟೆಯ ವೇಳೆಗೆ ಜೈಲಿನ ಮೇಲೆ ಏಕಕಾಲದಲ್ಲಿ ನೂರೈವತ್ತಕ್ಕೂ ಅಧಿಕ ಪೊಲೀಸರು ದಾಳಿ ಮಾಡಿದ್ದಾರೆ.

- Advertisement -

Latest News

error: Content is protected !!