Wednesday, May 1, 2024
Homeಕರಾವಳಿಅಸಹಾಯಕ ಪ್ರಾಣಿ ಪಕ್ಷಿಗಳ ಪಾಲಿನ ಆಶ್ರಯದಾತೆ ರಜನಿ ಶೆಟ್ಟಿಗೆ ಈ ವರ್ಷದ ಮಂಗಳೂರು ಪ್ರೆಸ್ ಕ್ಲಬ್‌...

ಅಸಹಾಯಕ ಪ್ರಾಣಿ ಪಕ್ಷಿಗಳ ಪಾಲಿನ ಆಶ್ರಯದಾತೆ ರಜನಿ ಶೆಟ್ಟಿಗೆ ಈ ವರ್ಷದ ಮಂಗಳೂರು ಪ್ರೆಸ್ ಕ್ಲಬ್‌ ಪ್ರಶಸ್ತಿ

spot_img
- Advertisement -
- Advertisement -

ಮಂಗಳೂರು: ಅಸಹಾಯಕ ಪ್ರಾಣಿ ಪಕ್ಷಿಗಳ ಪಾಲಿನ ಆಶ್ರಯದಾತೆ ರಜನಿ ಶೆಟ್ಟಿ ಈ ವರ್ಷದ ಮಂಗಳೂರು ಪ್ರೆಸ್ ಕ್ಲಬ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ.  ರಜನಿ ಶೆಟ್ಟಿ ಅವರು ಪ್ರತಿದಿನ 800ಕ್ಕೂ ಹೆಚ್ಚು ಬೀದಿ ನಾಯಿಗಳಿಗೆ ಊಟ ಹಾಕುವ, ತನ್ನ ಮನೆಯಲ್ಲೇ 55 ಬೀದಿ ನಾಯಿ, 15 ಬೆಕ್ಕು, 11 ಗಿಡುಗ, ದನ, ಕಾಗೆ, ಕೋಗಿಲೆ, ಆಮೆ, ಮೊಲಗಳನ್ನು ಸಾಕಿ ಸಲಹುತ್ತಿದ್ದಾರೆ. ತಮ್ಮ ಬದುಕನ್ನು ಅಸಹಾಯಕ ಪ್ರಾಣಿ  ಪಕ್ಷಿಗಳಿಗಾಗಿಯೇ ಮೀಸಲಿಟ್ಟಿದ್ದಾರೆ. ಈ ಹಿನ್ನೆಲೆ ಮಂಗಳೂರು ಬಲ್ಲಾಳ್‌ಬಾಗ್ ನಿವಾಸಿ ರಜನಿ ಶೆಟ್ಟಿ ಅವರನ್ನು ಮಂಗಳೂರು ಪ್ರೆಸ್ ಕ್ಲಬ್‌ನ ವರ್ಷದ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

 ಮಾ.5ರಂದು ಮಂಗಳೂರಿನ ಬೊಕ್ಕಪಟ್ಣ ಸಮೀಪದ ಪ್ಯಾರಡೈಸ್ ಐಲ್ಯಾಂಡ್‌ನಲ್ಲಿ ನಡೆಯಲಿರುವ ಪ್ರೆಸ್ ಕ್ಲಬ್ ದಿನಾಚರಣೆ ಸಮಾರಂಭದಲ್ಲಿ ರಜನಿ ಶೆಟ್ಟಿಯವರಿಗೆ ಪ್ರಶಸ್ತಿ ಪ್ರದಾನ ನಡೆಯಲಿದೆ ಎಂದು ಮಂಗಳೂರು ಪ್ರೆಸ್ ಕ್ಲಬ್‌ನ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಆರಿಫ್ ಪಡುಬಿದ್ರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!