Friday, June 5, 2026
Homeಕರಾವಳಿಏ.12ರಂದು ನಿಗದಿಯಾಗಿದ್ದ ಮಂಗಳೂರು ವಿವಿಯ ಎಲ್ಲಾ ಪದವಿ ಪರೀಕ್ಷೆಗಳು ಮುಂದೂಡಿಕೆ

ಏ.12ರಂದು ನಿಗದಿಯಾಗಿದ್ದ ಮಂಗಳೂರು ವಿವಿಯ ಎಲ್ಲಾ ಪದವಿ ಪರೀಕ್ಷೆಗಳು ಮುಂದೂಡಿಕೆ

- Advertisement -
- Advertisement -

ಮಂಗಳೂರು : ಈಗಾಗಲೇ ಏಪ್ರಿಲ್ 8 ರಿಂದ 10ರವರೆಗೆ ನಡೆಯಬೇಕಿದ್ದಂತ ಮಂಗಳೂರು ವಿವಿಯ ವಿವಿಧ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಲಾಗಿತ್ತು. ಇದೀಗ ಮತ್ತೆ ಏಪ್ರಿಲ್ 12ರಂದು ನಿಗದಿಪಡಿಸಲಾಗಿದ್ದಂತ ಎಲ್ಲಾ ಪದವಿ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಲಾಗಿದೆ.

ಮಂಗಳೂರು ವಿವಿಯು ಏಪ್ರಿಲ್ 8 ರಿಂದ ಏಪ್ರಿಲ್ 10 ರವರೆಗೆ ನಿಗದಿಪಡಿಸಿದ್ದ ಎಲ್ಲಾ ಪದವಿ ಪರೀಕ್ಷೆಗಳನ್ನು ಮುಂದೂಡಿ ಆದೇಶ ಹೊರಡಿಸಿದೆ. ಮುಂದೂಡಿದ ಪರೀಕ್ಷೆಗಳ ಪರಿಷ್ಕೃತ ದಿನಾಂಕವನ್ನು ನಿಗದಿ ಪಡಿಸಿ ಶೀಘ್ರದಲ್ಲೇ ತಿಳಿಸಲಾಗುವುದು. ಉಳಿದಂತೆ ಈ ಹಿಂದೆ ಪ್ರಕಟಿಸಿದ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಮಂಗಳೂರು ವಿವಿ ಕುಲಸಚಿವರು ಏಪ್ರಿಲ್ 7ರಂದು ಪ್ರಕಟಣೆಯಲ್ಲಿ ತಿಳಿಸಿದ್ದರು.

ಈಗ ಮತ್ತೆ ಸಾರಿಗೆ ನೌಕರರು ನಾಲ್ಕು ದಿನಗಳಿಂದ ನಡೆಸುತ್ತಿರುವಂತ ಮುಷ್ಕರದಿಂದಾಗಿ ಈಗ ಮತ್ತೆ ಮಂಗಳೂರು ವಿಶ್ವವಿದ್ಯಾಲಯದಿಂದ ಏಪ್ರಿಲ್ 12ರಂದು ನಿಗದಿಪಡಿಸಲಾಗಿದ್ದಂತ ಎಲ್ಲಾ ಪದವಿ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಲಾಗಿದೆ. ಈ ಸಂಬಂಧ ಪರೀಕ್ಷಾಂಗ ಕುಲಸಚಿವರು ವಿವಿ ಅಧೀನಕ್ಕೊಳಪಟ್ಟ ಎಲ್ಲಾ ಕಾಲೇಜುಗಳಿಗೆ ಸುತ್ತೋಲೆಯಲ್ಲಿ ತಿಳಿಸಿದ್ದಾರೆ.

ಇನ್ನೂ ಏಪ್ರಿಲ್ 12ರ ಪರೀಕ್ಷೆಗಳ ಪರಿಷ್ಕೃತ ವೇಳಾ ಪಟ್ಟಿಯನ್ನು ಶೀಘ್ರದಲ್ಲೇ ತಿಳಿಸಲಾಗುತ್ತದೆ ಎಂಬುದಾಗಿ ತಿಳಿಸಿದ್ದು, ಉಳಿದಂತೆ ಈ ಹಿಂದಿನ ವೇಳಾ ಪಟ್ಟಿಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ತಿಳಿಸಿದ್ದಾರೆ.

- Advertisement -

Latest News

error: Content is protected !!