Tuesday, April 30, 2024
Homeಕರಾವಳಿರಾಜ್ಯ ಸರ್ಕಾರಿ ನೌಕರರು ಅನಿರ್ದಿಷ್ಟಾವಧಿ ಮುಷ್ಕರ ಹಿನ್ನೆಲೆ; ಮಂಗಳೂರು ವಿವಿಯಿಂದ ಇಂದು ನಡೆಯಬೇಕಿದ್ದ ಎಲ್ಲಾ ಪದವಿ...

ರಾಜ್ಯ ಸರ್ಕಾರಿ ನೌಕರರು ಅನಿರ್ದಿಷ್ಟಾವಧಿ ಮುಷ್ಕರ ಹಿನ್ನೆಲೆ; ಮಂಗಳೂರು ವಿವಿಯಿಂದ ಇಂದು ನಡೆಯಬೇಕಿದ್ದ ಎಲ್ಲಾ ಪದವಿ ಪರೀಕ್ಷೆಗಳು ಮುಂದೂಡಿಕೆ

spot_img
- Advertisement -
- Advertisement -

ಮಂಗಳೂರು: ರಾಜ್ಯ ಸರ್ಕಾರಿ ನೌಕರರು ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆ  ಶಾಲಾ-ಕಾಲೇಜುಗಳಿಗೆ ಶಿಕ್ಷಕರು, ಉಪನ್ಯಾಸಕರು, ಪ್ರಾಧ್ಯಾಪಕರು ಗೈರು ಹಾಜರಾಗಿದ್ದಾರೆ. ಈ ಹಿನ್ನಲೆಯಲ್ಲಿ ಮಂಗಳೂರು ವಿವಿಯಿಂದ ಇಂದು ನಡೆಯಬೇಕಿದ್ದ ಎಲ್ಲಾ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ.

ಈ ಬಗ್ಗೆ ಮಂಗಳೂರು ವಿಶ್ವವಿದ್ಯಾಲಯದ ಪರೀಕ್ಷಾಂಗ ವಿಭಾಗದ ಕುಲಸಚಿವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ದಿನಾಂಕ 01-03-2023ರಂದು ಸರ್ಕಾರಿ ಉದ್ಯೋಗಿಗಳು ಮುಷ್ಕರಕ್ಕೆ ಕರೆ ನೀಡಿರುವ ಹಿನ್ನಲೆಯಲ್ಲಿ, ಈ ದಿನದಂದು ನಡೆಯಬೇಕಿದ್ದ ವಿವಿಯ ಎಲ್ಲಾ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಮುಂದೂಡಲಾಗಿರುವ ಪರೀಕ್ಷೆಗಳ ವೇಳಾಪಟ್ಟಿಯನ್ನು ಶೀಘ್ರದಲ್ಲೇ ತಿಳಿಸಲಾಗುವುದಾಗಿ ಹೇಳಿದ್ದಾರೆ.

- Advertisement -
spot_img

Latest News

error: Content is protected !!