- Advertisement -
- Advertisement -
ತಿರುವನಂತಪುರಂ : ದೇಶಾದ್ಯಂತ ಕೊರೊನಾ ಲಾಕ್ ಡೌನ್ ಘೋಷಿಸಲಾಗಿದ್ದು, ಲಾಕ್ ಡೌನ್ ವೇಳೆಯೇ ಮಲಯಾಳಂ ಚಿತ್ರರಂಗದ ನಟರೊಬ್ಬರು ದೇವಾಲಯದಲ್ಲಿ ಸರಳವಾಗಿ ವಿವಾಹವಾಗಿದ್ದಾರೆ.
ನಟ ಮಣಿಕಂದನ್ ಆಚಾರಿ ಅವರು ತಮ್ಮ ಗೆಳತಿ ಅಂಜಲಿಯನ್ನು ಭಾನುವಾರ ಕೇರಳದ ದೇವಸ್ಥಾನವೊಂದರಲ್ಲಿ ಸರಳವಾಗಿ ಮದುವೆಯಾಗಿದ್ದಾರೆ. ಜೊತೆಗೆ ತಮ್ಮ ಮದುವೆಗೆ ಖರ್ಚು ಮಾಡಬೇಕೆಂದುಕೊಂಡಿದ್ದ ಹಣವನ್ನು ಕೇರಳ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಿದ್ದಾರೆ.
ಮಣಿಕಂದನ್ ಮತ್ತು ಮತ್ತು ಅಂಜಲಿ ಮದುವೆ ಸಂದರ್ಭದಲ್ಲಿ ಕುಟುಂಬದವರು ಲಾಕ್ ಡೌನ್ ನಿಯಮಗಳನ್ನು ಪಾಲಿಸಿದ್ದಾರೆ. ಎಲ್ಲರೂ ಸಾಮಾಜಿಕ ಅಂತರ ಕಾಯ್ದುಕೊಂಡು ಮಾಸ್ಕ್ ಧರಿಸಿದ್ದರು.
- Advertisement -