ಉಡುಪಿ : ನಟೋರಿಯಸ್ ಗರುಡ ಗ್ಯಾಂಗ್ ಸದಸ್ಯ ಇಸಾಕ್ ಮೇಲೆ ಮಣಿಪಾಲ ಇನ್ಸ್ಪೆಕ್ಟರ್ ದೇವರಾಜ್ ಮತ್ತು ತಂಡ ಹಿರಿಯಡ್ಕ ವ್ಯಾಪ್ತಿಯಲ್ಲಿ ಫೈರಿಂಗ್ ಮಾಡಿದ್ದಾರೆ. ಸದ್ಯ ಗಾಯಗೊಂಡ ಇಸಾಕ್ ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಾ.12 ರಂದು ರಾತ್ರಿ 7:30 ರ ಸುಮಾರಿಗೆ ಖಚಿತ ಮಾಹಿತಿ ಮೇರೆಗೆ ಮಣಿಪಾಲ ಇನ್ಸ್ಪೆಕ್ಟರ್ ದೇವರಾಜ್ ಮತ್ತು ತಂಡ ಹಿರಿಯಡ್ಕದಲ್ಲಿ ಇರುವ ಬಗ್ಗೆ ಮಾಹಿತಿ ಮೇರೆಗೆ ಬಂಧಿಸಲು ಕಾರ್ಯಾಚರಣೆ ನಡೆಸುತ್ತಿದ್ದಾಗ ಪೊಲೀಸರ ಮೇಲೆ ಹಲ್ಲೆ ಮಾಡಿದಾಗ ಜೀವ ರಕ್ಷಣೆಗಾಗಿ ಇನ್ಸ್ಪೆಕ್ಟರ್ ದೇವರಾಜ್ ಇಸಾಕ್ ಕಾಲಿಗೆ ಪಿಸ್ತೂಲ್ ನಿಂದ ಫೈರಿಂಗ್ ಮಾಡಿದ್ದಾರೆ

ಏನಿದು ಪ್ರಕರಣ?;
ಬೆಂಗಳೂರಿನ ನೆಲಮಂಗಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪುತ್ತೂರು ಉದ್ಯಮಿಯ ಬಳಿ ದರೋಡೆ ಪ್ರಕರಣ ಸಂಬಂಧ ಗರುಡ ಗ್ಯಾಂಗ್ ಕುಖ್ಯಾತ ಸದಸ್ಯ ಇಸಾಕ್ ಉಡುಪಿಯಲ್ಲಿ ಇರುವ ಬಗ್ಗೆ ಮಾಹಿತಿ ಪಡೆದು ಮಾ.4 ರಂದು ರಾತ್ರಿ ನೆಲಮಂಗಲ ಪೊಲೀಸರು ಮತ್ತು ಮಣಿಪಾಲ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ಮಾಡುತ್ತಿದ್ದ ವೇಳೆ ಥಾರ್ ಜೀಪ್ ನಲ್ಲಿ ತಪ್ಪಿಸಿಕೊಂಡು ವಿವಿಧ ವಾಹನಗಳಿಗೆ ಡಿಕ್ಕಿ ಹೊಡೆದು ಬಳಿಕ ವಾಹನದಿಂದ ಹಾರಿ ಇಸಾಕ್ ಪರಾರಿಯಾಗಿದ್ದ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇನ್ನು ಇಸಾಕ್ ಪ್ರೇಯಸಿ ತಾಯಿಯನ್ನು ಬಂಧಿಸಲಾಗಿದ್ದು ಆಕೆ ನ್ಯಾಯಾಂಗ ಬಂಧನದಲ್ಲಿದ್ದಾರೆ.
ಈ ಪ್ರಕರಣ ಸಂಬಂಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪರಾರಿಯಾದ ಗರುಡ ಗ್ಯಾಂಗ್ ಸದಸ್ಯ ಇಸಾಕ್ ಮತ್ತು ಆತನ ಪ್ರೇಯಸಿ ವಿರುದ್ಧ ಕೊಲೆ ಯತ್ನ ಹಾಗೂ ಅರ್ಮ್ಸ್ ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರೇಯಸಿಯನ್ನು ಬಂಧಿಸಿ ಉಡುಪಿ ನ್ಯಾಯಾಲಕ್ಕೆ ಹಾಜರುಪಡಿಸಿ ಹೆಚ್ಚಿನ ತನಿಖೆಗಾಗಿ ಮಣಿಪಾಲ ಪೊಲೀಸರು ಕಸ್ಟಡಿಗೆ ಪಡೆದಿದ್ದರು.
ಗರುಡ ಗ್ಯಾಂಗ್ ಸದಸ್ಯ ಇಸಾಕ್ ಪ್ರೇಯಸಿ ಕಾಸರಗೋಡು ನಿವಾಸಿಯಾಗಿರುವ 23 ವರ್ಷದ ಲಾ ಕಾಲೇಜ್ ವಿದ್ಯಾರ್ಥಿನಿ ಥಾರ್ ವಾಹನದಲ್ಲಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದಳು. ಆಕೆಯನ್ನು ಪೊಲೀಸರು ಬಂಧಿಸಿದ್ದರು.