Wednesday, June 3, 2026
Homeಕರಾವಳಿಮಂಜೇಶ್ವರ: ಯುವಕನ ಮೃತದೇಹ ನಿಗೂಢ ಸ್ಥಿತಿಯಲ್ಲಿ ಪತ್ತೆ

ಮಂಜೇಶ್ವರ: ಯುವಕನ ಮೃತದೇಹ ನಿಗೂಢ ಸ್ಥಿತಿಯಲ್ಲಿ ಪತ್ತೆ

- Advertisement -
- Advertisement -

ಮಂಜೇಶ್ವರ: ಇಲ್ಲಿಯ ಪೈವಳಿಕೆ ಸಮೀಪದ ಬಾಯಿಕಟ್ಟೆ ಸಮೀಪದ ಮಸೀದಿ ಪರಿಸರದ ಕೆರೆಯಲ್ಲಿ ಯುವಕನ ಮೃತದೇಹ ನಿಗೂಢ ರೀತಿಯಲ್ಲಿ ಪತ್ತೆಯಾಗಿದೆ.

ಮೃತ ಯುವಕನನ್ನು ಬಾಯಿಕಟ್ಟೆಯ ಖಾಸಿಂ ( 28) ಎಂದು ಗುರುತಿಸಲಾಗಿದೆ.

ಪೈವಳಿಕೆಯ ಚಿಕನ್ ಸ್ಟಾಲ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಖಾಸಿಂ ಸೋಮವಾರ ಬೆಳಿಗ್ಗೆ ಕೆಲಸಕ್ಕೆ ತೆರಳಿದ್ದರು. ಬಳಿಕ ನಾಪತ್ತೆಯಾಗಿದ್ದರು. ಮನೆಯವರು ಎಲ್ಲ ಕಡೆ ಹುಡುಕಿದರೂ ಯಾವುದೇ ರೀತಿಯ ಪ್ರಯೋಜನವಾಗಿರಲಿಲ್ಲ. ಆದರೆ ನಿನ್ನೆ ಸಂಜೆ ಕೆರೆಯಲ್ಲಿ ಮೃತದೇಹ ಪತ್ತೆಯಾಗಿದೆ.

ಸ್ಥಳೀಯರು ಗಮನಿಸಿ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕಾಗಮಿಸಿದ ಮಂಜೇಶ್ವರ ಪೊಲೀಸರು ಮೃತದೇಹ ಮೇಲಕ್ಕೆತ್ತಿ ಮಹಜರು ನಡೆಸಿದರು. ಯುವಕನ ಸಾವಿನ ಬಗ್ಗೆ ಕುಟುಂಬಸ್ಥರು ಸಂಶಯ ವ್ಯಕ್ತಪಡಿಸಿದ್ದು, ತನಿಖೆಗೆ ಒತ್ತಾಯಿಸಿದ್ದಾರೆ.

- Advertisement -

Latest News

error: Content is protected !!