Sunday, May 5, 2024
Homeಕರಾವಳಿಉಡುಪಿಮಂಗಳೂರು: ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್ ವಿಧಿವಶ

ಮಂಗಳೂರು: ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್ ವಿಧಿವಶ

spot_img
- Advertisement -
- Advertisement -

ಮಂಗಳೂರು: ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್ ಅಲ್ಪಕಾಲದ ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.ಅವರಿಗೆ 63 ವರ್ಷ ವಯಸ್ಸಾಗಿತ್ತು.

ಕಾರ್ಕಳ ತಾಲೂಕಿನ ಕರ್ವಾಲು ಗ್ರಾಮದವರಾದ ಮನೋಹರ ಪ್ರಸಾದ್ ಮಂಗಳೂರಿನಲ್ಲಿ ಕಾಲೇಜು ಪದವಿ ಶಿಕ್ಷಣ ಮುಗಿಸಿ ನವ ಭಾರತ ಪತ್ರಿಕೆಯಲ್ಲಿ ಪತ್ರಿಕಾ ವೃತ್ತಿ ಜೀವನ ಆರಂಭಿಸಿದ್ದರು. ಬಳಿಕ ಉದಯವಾಣಿ ಮಂಗಳೂರು ವರದಿಗಾರರಾಗಿ ಸೇರ್ಪಡೆಗೊಂಡಿದ್ದರು. ಅಲ್ಲಿಂದ ಮುಖ್ಯ ವರದಿಗಾರರಾಗಿ, ಬಳಿಕ ಬ್ಯೂರೋ ಚೀಫ್ ಆಗಿದ್ದ ಅವರು ಬಳಿಕ ಸಹಾಯಕ ಸಂಪಾದಕರಾಗಿದ್ದರು. ಇದರೊಂದಿಗೆ ಉದಯವಾಣಿಯಲ್ಲಿ ಸತತ 36 ವರ್ಷಗಳ ಸೇವೆ ಸಲ್ಲಿಸಿದ್ದ ಅವರು ಕಳೆದ ಎರಡು ವರ್ಷದ ಹಿಂದೆ ನಿವೃತ್ತಿಗೊಂಡಿದ್ದರು.

ಕರ್ನಾಟಕ ರಾಜ್ಯೋತ್ಸವ ಸಹಿತ ಹಲವಾರು ಪ್ರಶಸ್ತಿಗಳನ್ನು ಪಡೆದಿದ್ದ ಇವರು ಉತ್ತಮ ಕಾರ್ಯಕ್ರಮ ನಿರೂಪಕರಾಗಿಯೂ ಗುರುತಿಸಿಕೊಂಡಿದ್ದರು.

- Advertisement -
spot_img

Latest News

error: Content is protected !!