- Advertisement -
- Advertisement -
ಬಂಟ್ವಾಳ: ನೇತ್ರಾವತಿ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಕುಂಪಲ ಗ್ರಾಮದ ಸೋಮೇಶ್ವರ ನಿವಾಸಿ ನಾಗೇಶ್ ಪೂಜಾರಿ (45) ಮೃತ ವ್ಯಕ್ತಿ. ಪಾಣೆಮಂಗಳೂರು ಜೈನರಪೇಟೆ ನೂರುಗುಡ್ಡೆ ಬಳಿ ನೇತ್ರಾವತಿ ನದಿಯಲ್ಲಿ ಶನಿವಾರ ಮೃತದೇಹ ಪತ್ತೆಯಾಗಿದೆ . ಈತ ವಿಟ್ಲದಲ್ಲಿ ಹೊಟೇಲ್ ಕಾರ್ಮಿಕ, ಆಕಸ್ಮಿಕವಾಗಿ ನೀರಿಗೆ ಬಿದ್ದಿರುವುದು ಅಥವಾ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.
ವಿಪರೀತ ಕುಡಿತದ ಚಟ ಹೊಂದಿರುವ ಅವರು 2-3 ದಿನಗಳ ಹಿಂದೆ ಮೃತಪಟ್ಟಿರುವ ಸಾಧ್ಯತೆ ಇದ್ದು, ನದಿಯಲ್ಲಿ ಮೃತದೇಹ ತೇಲುತ್ತಿರುವುದನ್ನು ಕಂಡು ಸ್ಥಳೀಯ ಈಜುಗಾರರು ಮೇಲಕ್ಕೆತ್ತಿದ್ದರು. ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -