Thursday, June 4, 2026
Homeತಾಜಾ ಸುದ್ದಿಉಳ್ಳಾಲ: ನೇತ್ರಾವತಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

ಉಳ್ಳಾಲ: ನೇತ್ರಾವತಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

- Advertisement -
- Advertisement -

ಉಳ್ಳಾಲ: ನೇತ್ರಾವತಿ ನದಿಯಲ್ಲಿ ಕೊಳೆತ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹವೊಂದು ಏ.19 ರ ಮಂಗಳವಾರ ಬೆಳಿಗ್ಗೆ ಪತ್ತೆಯಾಗಿದೆ. ಸುಮಾರು 30-40 ವರ್ಷ ಪ್ರಾಯದ ವ್ಯಕ್ತಿಯ ಮೃತದೇಹ ಆಗಿರಬಹುದೆಂದು ಅಂದಾಜಿಸಲಾಗಿದ್ದು, ವಾಹನ ಸವಾರರೊಬ್ಬರು ಮೊದಲು ನದಿ ತಟದಲ್ಲಿದ್ದ ಮೃತದೇಹ ಗಮನಿಸಿ, ಬಳಿಕ ಕಂಕನಾಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಮೃತದೇಹವನ್ನು ನೋಡಲು ರಸ್ತೆಯಲ್ಲಿ ಸವಾರರು ಹಲವು ವಾಹನ ನಿಲ್ಲಿಸಿದ ಪರಿಣಾಮ ಸುಗಮ ಸಂಚಾರಕ್ಕೆ ತೊಡಕಾಯಿತು. ಬಳಿಕ ಮಂಗಳೂರು ಗ್ರಾಮಾಂತರ ಠಾಣಾ ಪೊಲೀಸರು ಸ್ಥಳದಲ್ಲಿ ಜಮಾಯಿಸಿದ ವಾಹನ ಸವಾರರನ್ನು ಚದುರಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಇನ್ನು ಅಗ್ನಿಶಾಮಕ ದಳ ಸಹಾಯದಿಂದ ಮೃತದೇಹವನ್ನು ನೀರಿನಿಂದ ಮೇಲಕ್ಕೆತ್ತಲಾಗಿದೆ.

- Advertisement -

Latest News

error: Content is protected !!