Wednesday, June 3, 2026
Homeಕರಾವಳಿಬೆಳ್ತಂಗಡಿ: ಮುಗುಳಿ ನಾರಾಯಣ ರಾವ್, ಚಂದನ್ ಪ್ರಸಾದ್ ಕಾಮತ್ ಸಹಿತ ಹಲವು ಕಾಂಗ್ರೆಸ್‌ ನಾಯಕರು ಬಿಜೆಪಿಗೆ...

ಬೆಳ್ತಂಗಡಿ: ಮುಗುಳಿ ನಾರಾಯಣ ರಾವ್, ಚಂದನ್ ಪ್ರಸಾದ್ ಕಾಮತ್ ಸಹಿತ ಹಲವು ಕಾಂಗ್ರೆಸ್‌ ನಾಯಕರು ಬಿಜೆಪಿಗೆ ಸೇರ್ಪಡೆ

- Advertisement -
- Advertisement -

ಬೆಳ್ತಂಗಡಿ: ಎಸ್‌ಡಿಎಂ ಕಲಾಭವನದಲ್ಲಿ ನಡೆದ ಬಿಜೆಪಿ ಮಂಡಲದ ಪದಾಧಿಕಾರಿಗಳ ಸಭೆಯಲ್ಲಿ ಬೇರೆ ಪಕ್ಷಗಳ ಹಲವು ನಾಯಕರು ಬಿಜೆಪಿಗೆ ಸೇರ್ಪಡೆಗೊಂಡರು.

ಪಟ್ಟಣ ಪಂಚಾಯತ್ ಮಾಜಿ ಅಧ್ಯಕ್ಷ ಮುಗುಳಿ ನಾರಾಯಣ ರಾವ್, ಧರ್ಮಸ್ಥಳ ಗ್ರಾ.ಪಂ ಮಾಜಿ ಅಧ್ಯಕ್ಷ, ಯುವ ಕಾಂಗ್ರೆಸ್ ಮುಖಂಡರಾಗಿದ್ದ ಚಂದನ್ ಪ್ರಸಾದ್ ಕಾಮತ್, ಲಾಯಿಲ ಗ್ರಾ.ಪಂ ಮಾಜಿ ಅಧ್ಯಕ್ಷ, ತಾ.ಪಂ ಮಾಜಿ ಸದಸ್ಯ ಸುಧಾಕರ ಬಿ.ಎಲ್, ಮುಂಡಾಜೆ ಗ್ರಾ.ಪಂ ಮಾಜಿ ಸದಸ್ಯೆ ಅಶ್ವಿನಿ ಹೆಬ್ಬಾರ್, ವೇಣೂರಿನ ಸತೀಶ್ ನಡಿವಾಳ, ಧರ್ಮಸ್ಥಳ ಗ್ರಾ.ಪಂ ಸದಸ್ಯೆ ಗಾಯತ್ರಿ, ಕುಕ್ಕಳದ ರಾಜೇಶ್ವರಿ, ಮಾಲಾಡಿ ಗ್ರಾ.ಪಂ ಸದಸ್ಯ ಪುನೀತ್ ಕುಮಾರ್, ಸಹಕಾರಿ ಧುರೀಣ ಪುಷ್ಪರಾಜ ಜೈನ್, ಕನ್ಯಾಡಿ ಎಸ್‌ಡಿಎಂಸಿ ಅಧ್ಯಕ್ಷ ನಂದ ಭಟ್, ಸತೀಶ್ ರಾವ್ ನಿಡ್ಡೆ ಮಹೇಶ್ ಜೈನ್ ಧರ್ಮಸ್ಥಳ, ಧರ್ಮಸ್ಥಳ ಗ್ರಾ.ಪಂ ಮಾಜಿ ಸದಸ್ಯ ಆಂಟೊನಿ ಕಲ್ಲೇರಿ, ಬಿಎಸ್ಎಫ್ ಮಾಜಿ ಯೋಧ ಸೆಬಾಸ್ಟಿಯನ್, ಆರಂಬೋಡಿ ಗ್ರಾ.ಪಂ ಮಾಜಿ ಸದಸ್ಯ ಆನಂದ ಶೆಟ್ಟಿ, ಕಾಶಿಬೆಟ್ಟು ಶನೈಶ್ಚರ ದೇವಸ್ಥಾನದ ಮೊತ್ತೇಸರ ಜನಾರ್ದನ ಆಚಾರ್ಯ, ಕುಕ್ಕಳದ ವಿಠಲ, ಮೊಗ್ರು ಗ್ರಾಮದ ಕೇಶವ, ಕಲ್ಮಂಜ ಗುತ್ತು ಮನೆಯ ಸುಂದರಿ, ಮೊದಲಾದ ನಾಯಕರು, ಚಂದನ್ ಪ್ರಸಾದ್ ಕಾಮತ್ ಅವರ ಜೊತೆ ಹಲವಾರು ಮಂದಿ ಅಭಿಮಾನಿಗಳು ಬಿಜೆಪಿಗೆ ಸೇರ್ಪಡೆಗೊಂಡರು.

ಈ ಸಂದರ್ಭ ಸಚಿವರಾದ ಸುನಿಲ್ ಕುಮಾರ್, ಶಾಸಕ ಹರೀಶ್ ಪೂಂಜ, ಮಂಡಲದ ಅಧ್ಯಕ್ಷ ಜಯಂತ ಕೋಟ್ಯಾನ್, ಮೊದಲಾದವರು ಉಪಸ್ಥಿತರಿದ್ದರು.

- Advertisement -

Latest News

error: Content is protected !!