Saturday, May 18, 2024
Homeತಾಜಾ ಸುದ್ದಿಸ್ವಾತಂತ್ರ್ಯ ದಿನಾಚರಣೆಯಂದು ಸಿಎಂರಿಂದ ಹಲವು ಮಹತ್ವದ ಘೋಷಣೆ: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರಿ ಉದ್ಯೋಗ

ಸ್ವಾತಂತ್ರ್ಯ ದಿನಾಚರಣೆಯಂದು ಸಿಎಂರಿಂದ ಹಲವು ಮಹತ್ವದ ಘೋಷಣೆ: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರಿ ಉದ್ಯೋಗ

spot_img
- Advertisement -
- Advertisement -

ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆ ದಿನವಾದ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಲವು ಮಹತ್ವದ ಘೋಷಣೆಗಳನ್ನು ಮಾಡಿದರು.

ಕರ್ತವ್ಯ ನಿರ್ವಹಣೆ ವೇಳೆ ಹುತಾತ್ಮರಾಗುವ ರಾಜ್ಯದ ಯೋಧರ ಕುಟುಂಬಕ್ಕೆ ಸರ್ಕಾರಿ ಉದ್ಯೋಗ ನೀಡುವುದಾಗಿ ಹೇಳಿರುವ ಬಸವರಾಜ ಬೊಮ್ಮಾಯಿ, ಯಾವುದೇ ವಿಳಂಬ ಮಾಡದೇ ಕುಟುಂಬಸ್ಥರಿಗೆ 25 ಲಕ್ಷ ರೂ. ಪರಿಹಾರವನ್ನೂ ನೋಡುವುದಾಗಿ ಘೋಷಿಸಿದ್ದಾರೆ.

ಹಾಗೇ ರಾಜ್ಯದ ಎಲ್ಲಾ ಸರ್ಕಾರಿ ಶಾಲೆ, ಕಾಲೇಜುಗಳಲ್ಲಿ 250 ಕೋಟಿ ರೂ. ವೆಚ್ಚದಲ್ಲಿ ಶೇ. 100ರಷ್ಟು ಶೌಚಾಲಯ ನಿರ್ಮಾಣ, ಕರ್ನಾಟಕ ಕರಕುಶಲ ಅಭಿವೃದ್ಧಿ ನಿಗಮದಿಂದ ಕುಂಬಾರ, ಕಮ್ಮಾರ, ಬಡಗಿ, ಶಿಲ್ಪಿಗಳು, ಭಜಂತ್ರಿ, ಬುಟ್ಟಿ ಹೆಣೆಯುವವರು, ವಿಶ್ವಕರ್ಮರು, ಮಾದರು ಮತ್ತಿತರ ಕುಶಲಕರ್ಮಿಗಳಿಗೆ ತಲಾ 50 ಸಾವಿರ ರೂ.ವರೆಗೆ ಸಾಲ ಸಹಾಯಧನ ಯೋಜನೆ ಜಾರಿ ಸೇರಿದಂತೆ ಹಲವು ಮಹತ್ವದ ಘೋಷಣೆಗಳನ್ನು ಮಾಡಿದ್ದಾರೆ.

- Advertisement -
spot_img

Latest News

error: Content is protected !!