- Advertisement -
![]()
- Advertisement -
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2026ನೇ ಸಾಲಿನ ಬಜೆಟ್ ಭಾಷಣದಲ್ಲಿ ರಾಜ್ಯದ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಹಾಗೂ ಮೀನುಗಾರರ ಜೀವನಮಟ್ಟ ಸುಧಾರಣೆಗೆ ಹಲವು ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಘೋಷಿಸಿದರು.
ಮೀನುಗಾರರಿಗೆ ಉಚಿತವಾಗಿ ನೀಡಲಾಗುತ್ತಿರುವ ಮೀನುಗಾರಿಕೆ ಸಲಕರಣೆ ಕಿಟ್ ಮೌಲ್ಯವನ್ನು10,000 ರೂ.ಗಳಿಂದ 20,000 ರೂ.ಗಳಿಗೆ ಹೆಚ್ಚಿಸಲಾಗುವುದು. ಜೈವಿಕ ತಂತ್ರಜ್ಞಾನ ಉದ್ಯಮಗಳು, ನವೀನ ತಂತ್ರಜ್ಞಾನಗಳ ಅಭಿವೃದ್ಧಿ ಹಾಗೂ ಸಮುದ್ರ ಕೃಷಿ ಉತ್ತೇಜನಕ್ಕಾಗಿ ಮಂಗಳೂರು ಮೀನುಗಾರಿಕಾ ಮಹಾವಿದ್ಯಾಲಯದಲ್ಲಿ Centre of Excellence ಅನ್ನು ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಹೇಳಿದರು.
ಮೀನು ಮಾರಾಟಕ್ಕೆ ಅಗತ್ಯವಿರುವ ಸುಸಜ್ಜಿತ ಮೀನು ಮಾರುಕಟ್ಟೆಗಳನ್ನು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಮೀನು ಮಾರುಕಟ್ಟೆಯನ್ನು ನಿರ್ಮಿಸಲಾಗುವುದು ಎಂದು ಅವರು ಹೇಳಿದರು.
- Advertisement -


