Sunday, May 19, 2024
Homeತಾಜಾ ಸುದ್ದಿದಕ್ಷಿಣ ಕನ್ನಡ: ಜಿಲ್ಲೆಯಲ್ಲಿ ಕೋವಿಡ್‌ ಪ್ರಕರಣ ತುಸು ಏರಿಕೆ: ಬೂಸ್ಟರ್‌ ಡೋಸ್‌ ಪಡೆಯಲು ಇನ್ನೂ ಹಲವು...

ದಕ್ಷಿಣ ಕನ್ನಡ: ಜಿಲ್ಲೆಯಲ್ಲಿ ಕೋವಿಡ್‌ ಪ್ರಕರಣ ತುಸು ಏರಿಕೆ: ಬೂಸ್ಟರ್‌ ಡೋಸ್‌ ಪಡೆಯಲು ಇನ್ನೂ ಹಲವು ಮಂದಿ ಬಾಕಿ

spot_img
- Advertisement -
- Advertisement -

ದಕ್ಷಿಣ ಕನ್ನಡ: ಜಿಲ್ಲೆಯಲ್ಲಿ ಕೆಲವು ದಿನಗಳಿಂದ ಕೋವಿಡ್ ಪ್ರಕರಣ ತುಸು ಏರಿಕೆಯತ್ತ ಸಾಗುತ್ತಿದ್ದು, ಬೂಸ್ಟರ್ ಡೋಸ್ ಲಸಿಕೆ ಪಡೆದುಕೊಳ್ಳಲು ಹೆಚ್ಚಿನ ಮಂದಿ ಆಸಕ್ತಿ ತೋರುತ್ತಿಲ್ಲ. ಮಂಗಳೂರು ಮಹಾನಗರ ಪಾಲಿಕೆ ಮತ್ತು ತಾಲೂಕು ವ್ಯಾಪ್ತಿಯಲ್ಲಿ ಸುಮಾರು 5.5 ಲಕ್ಷ ಮಂದಿ ಅರ್ಹರು ಇನ್ನೂ ಬೂಸ್ಟರ್ ಡೋಸ್ ಲಸಿಕೆ ಪಡೆದಿಲ್ಲ.

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಹಿನ್ನೆಲೆಯಿಂದ ಜು. 15ರಿಂದ 75 ದಿನಗಳ ಕಾಲ 18 ರಿಂದ 59 ವಯಸ್ಸಿನವರಿಗೆ ಉಚಿತ ಮುನ್ನೆಚ್ಚರಿಕೆ ಡೋಸ್ ನೀಡಲು ಕೇಂದ್ರ ಸರಕಾರ ಮುಂದಾಗಿದ್ದು, ಲಸಿಕೆಯ ಪಡೆಯುವವರ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ನಿರೀಕ್ಷೆ ಇದೆ. 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರೂ ಕೋವಿಡ್ ಬೂಸ್ಟರ್ ಡೋಸ್ ಲಸಿಕೆ ಪಡೆಯಲು ಕೇಂದ್ರ ಸರಕಾರ ಎಪ್ರಿಲ್ ತಿಂಗಳಿನಲ್ಲಿಯೇ ಅನುಮತಿ ನೀಡಿತ್ತು. 18 ರಿಂದ 60 ವರ್ಷದೊಳಗಿನ ಮಂದಿ ಖಾಸಗಿ ಆಸ್ಪತ್ರೆಗಳಲ್ಲಿ ನಿಗದಿತ ಬೆಲೆಯೊಂದಿಗೆ ಮತ್ತು 60 ವರ್ಷ ಮೇಲ್ಪಟ್ಟವರಿಗೆ ಸರಕಾರಿ ಆಸ್ಪತ್ರೆಗಳಲ್ಲಿ ಉಚಿತ ಔಷಧ ನಿಗದಿಗೊಳಿಸಲಾಗಿತ್ತು. ಆದರೆ ಹಣ ನೀಡಿ ಹೆಚ್ಚಿನ ಮಂದಿ ಲಸಿಕೆ ಪಡೆದುಕೊಳ್ಳುತ್ತಿರಲಿಲ್ಲ. ಮುಂಬರುವ ದಿನಗಳಲ್ಲಿ ರಾಜ್ಯ/ಕೇಂದ್ರ ಸರಕಾರವು ಎಲ್ಲ ವಯೋಮಿತಿಯವರಿಗೆ ಬೂಸ್ಟರ್ ಡೋಸ್ ಉಚಿತವಾಗಿ ನೀಡಿದರೆ ಆಗ ಪಡೆದುಕೊಳ್ಳೋಣ ಎಂಬ ಭಾವನೆ ಅನೇಕರಲ್ಲಿತ್ತು. ಇದೀಗ ಉಚಿತ ಲಸಿಕೆ ನೀಡುವತ್ತ ಕೇಂದ್ರ ಸರಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಜಿಲ್ಲೆಯ ಲಸಿಕಾ ಪ್ರಗತಿ ಹೆಚ್ಚುವ ನಿರೀಕ್ಷೆ ಇದೆ.

- Advertisement -
spot_img

Latest News

error: Content is protected !!