Thursday, June 4, 2026
Homeತಾಜಾ ಸುದ್ದಿಸುರತ್ಕಲ್‌ ಟೋಲ್‌ಗೆ ಮುತ್ತಿಗೆ ಹಾಕಲು ಯತ್ನ: ಹಲವು ಪ್ರತಿಭಟನಾಕಾರರು ಪೊಲೀಸರ ವಶ

ಸುರತ್ಕಲ್‌ ಟೋಲ್‌ಗೆ ಮುತ್ತಿಗೆ ಹಾಕಲು ಯತ್ನ: ಹಲವು ಪ್ರತಿಭಟನಾಕಾರರು ಪೊಲೀಸರ ವಶ

- Advertisement -
- Advertisement -

ಸುರತ್ಕಲ್: ರಾಷ್ಟ್ರೀಯ ಹೆದ್ದಾರಿ ಸುರತ್ಕಲ್ ಟೋಲ್ ತೆರವುಗೊಳಿಸುವ ಬಗ್ಗೆ ಪ್ರತಿಭಟನೆ ತೀವ್ರಗೊಂಡಿದ್ದು, ಹೋರಾಟ ಸಮಿತಿಯ ಪ್ರಮುಖರು ಸೇರಿದಂತೆ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದರು. ಸ್ಥಳದಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಿದೆ. ಪ್ರತಿಭಟನಾಕಾರರು ಪೊಲೀಸ್‌ ಬ್ಯಾರಿಕೇಡ್‌ಗಳನ್ನು ತಳ್ಳಿ ಟೋಲ್‌ಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ಪ್ರತಿಬಟನಾಕಾರರನ್ನು ನಡೆದಿದ್ದಾರೆ.

ಹೋರಾಟ ಸಮಿತಿಯ ಪ್ರಮುಖರಾದ ಮುನೀರ್ ಕಾಟಿಪಳ್ಳ, ಮಾಜಿ ಶಾಸಕರಾದ ಐವನ್ ಡಿಸೋಜ, ಶಕುಂತಳಾ ಶೆಟ್ಟಿ, ಜೆ.ಆರ್.ಲೋಬೊ, ಮೊಯ್ದಿನ್ ಬಾವ, ಪ್ರಮುಖರಾದ ಮಿಥುನ್ ರೈ, ಶಶಿಧರ್ ಹೆಗ್ಡೆ, ಪ್ರತಿಭಾ ಕುಳಾಯಿ, ಬಿ.ಕೆ.ಇಯ್ತಿಯಾಝ್ ಸೇರಿದಂತೆ ಪ್ರತಿಭಟನಾಕಾರರನ್ನೆಲ್ಲ ಪೊಲೀಸರು ವಶಕ್ಕೆ ಪಡೆದು ಸ್ಥಳದಿಂದ ವಾಹನದಲ್ಲಿ ಕರೆದೊಯ್ದಿದ್ದಾರೆ.

.

- Advertisement -

Latest News

error: Content is protected !!