Monday, April 29, 2024
Homeಅಪರಾಧಬೃಹತ್ ಪ್ರಮಾಣದಲ್ಲಿ ಗಾಂಜಾ ಸಾಗಾಟ; ಸಿಸಿಬಿ ಪೊಲೀಸ್ ಕಾರ್ಯಾಚರಣೆಯಲ್ಲಿ 28 ಲಕ್ಷ ಮೌಲ್ಯದ ಗಾಂಜಾ ವಶ

ಬೃಹತ್ ಪ್ರಮಾಣದಲ್ಲಿ ಗಾಂಜಾ ಸಾಗಾಟ; ಸಿಸಿಬಿ ಪೊಲೀಸ್ ಕಾರ್ಯಾಚರಣೆಯಲ್ಲಿ 28 ಲಕ್ಷ ಮೌಲ್ಯದ ಗಾಂಜಾ ವಶ

spot_img
- Advertisement -
- Advertisement -

ಮಂಗಳೂರು: ಸಿಸಿಬಿ ಪೊಲೀಸರು ಇನ್ಸ್ ಪೆಕ್ಟರ್‌ ಶ್ಯಾಂ ಸುಂದರ್ ನೇತೃತ್ವದಲ್ಲಿ ಮಂಗಳೂರಿನಲ್ಲಿ ನಡೆದ ಮಹತ್ವದ ಕಾರ್ಯಾಚರಣೆಯಲ್ಲಿ ಬೃಹತ್ ಪ್ರಮಾಣದಲ್ಲಿ ಗಾಂಜಾ ಸಾಗಾಟ ಪತ್ತೆ ಮಾಡಿದ್ದು, ಈ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ

ಕಾರ್ಯಾಚರಣೆಯಲ್ಲಿ ಬಂಧಿಸಿದ ಆರೋಪಿಗಳು ಕೇರಳ ವಯನಾಡಿನ ಅನೂಪ್ ಎಂ.ಎಸ್(28) ಮತ್ತು ಕಣ್ಣೂರಿನ ಲತೀಪ್ ಕೆ.ವಿ(36).

ಒರಿಸ್ಸಾ ರಾಜ್ಯದಿಂದ ಮಂಗಳೂರು ನಗರ ಹಾಗೂ ಕೇರಳ ರಾಜ್ಯಕ್ಕೆ ಉಳ್ಳಾಲದ ತಲಪಾಡಿಯಲ್ಲಿ ಮಹೇಂದ್ರ ಬೊಲೆರೋ ವಾಹನದಲ್ಲಿ ಭಾರಿ ಪ್ರಮಾಣದಲ್ಲಿ ಗಾಂಜಾ ಸಾಗಾಟವಾಗುತ್ತಿದೆ ಎಂಬ ಮಾಹಿತಿಯನ್ನು ತಿಳಿದ ಸಿಸಿಬಿ ಪೊಲೀಸರು ತಮ್ಮ ತಂಡದೊಂದಿಗೆ ಸ್ಥಳಕ್ಕೆ ದಾಳಿ ನಡೆಸಿದರು. ಕಾರ್ಯಾಚರಣೆಯಲ್ಲಿ ರೂ. 28 ಲಕ್ಷ ಮೌಲ್ಯದ 120 ಕೆಜಿ ಗಾಂಜಾ ವಶಕ್ಕೆ ಪಡೆಯಲಾಗಿದೆ. ಗಾಂಜಾ, ಸಾಗಟದ ವಾಹನ ಮೊಬೈಲ್ ಫೋನ್ ಸೇರಿದಂತೆ ಒಟ್ಟು ರೂ. 35,14,520/ ಮೌಲ್ಯದ ವಸ್ತುಗಳನ್ನು ಪೋಲಿಸರು ಸ್ವಾಧೀನ ಪಡಿಸಿಕೊಂಡಿದ್ದಾರೆ.

ಆರೋಪಿಗಳ ಪೈಕಿ ಓರ್ವನಾದ ಅನೂಪ್ ಎಂಬಾತನ ವಿರುದ್ಧ ಈ ಹಿಂದೆಯೇ ಮೈಸೂರು ಜಿಲ್ಲೆ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ 2018 ರಲ್ಲಿ ದರೋಡೆ ಪ್ರಕರಣವೊಂದು ದಾಖಲಾಗಿದೆ. ಅಲ್ಲದೇ ಕೇರಳ ರಾಜ್ಯದ ವಯನಾಡು ಜಿಲ್ಲೆಯ ಮೆಪ್ಪಳ್ಳಿ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತು ಸಾಗಾಟಕ್ಕೆ ಸಂಬಂಧಪಟ್ಟಂತೆ ಪ್ರಕರಣ, ವಯನಾಡು ಜಿಲ್ಲೆ ಕಲ್ಪಟ್ಟ ಪೊಲೀಸ್ ಠಾಣೆಯಲ್ಲಿ 2 ದರೋಡೆ ಪ್ರಕರಣ, ಒಂದು ಹಲ್ಲೆ ಪ್ರಕರಣ, ವಯನಾಡು ಜಿಲ್ಲೆಯ ಅಂಬಲವಯಲ್ ಪೊಲೀಸ್ ಠಾಣೆಯಲ್ಲಿ 2 ಕಳವು ಪ್ರಕರಣಗಳು ದಾಖಲಾಗಿದ್ದು ತನಿಖೆ ಮುಂದುವರೆದಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಅನುಪಮ್ ಅಗ್ರವಾಲ್ ಮಾಹಿತಿ ನೀಡಿದ್ದಾರೆ.

- Advertisement -
spot_img

Latest News

error: Content is protected !!