- Advertisement -
- Advertisement -
ಬೆಳ್ತಂಗಡಿ : ಇತ್ತೀಚೆಗೆ ಬಿಜೆಪಿ ಪಕ್ಷದಿಂದ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ನೆರಿಯ ಗ್ರಾಮ ಪಂಚಾಯತ್ ನ ಬಿಜೆಪಿ ಬೆಂಬಲಿತ ಸದಸ್ಯೆ ಮರಿಯಮ್ಮರವರು ಶಾಸಕರಾದ ಶ್ರೀ ಹರೀಶ್ ಪೂಂಜರವರ ಸಮ್ಮುಖದಲ್ಲಿ ಆ.29 ರಂದು ಬಿಜೆಪಿ ಪಕ್ಷಕ್ಕೆ ಮರು ಸೇರ್ಪಡೆಯಾದರು.
ಈ ಸಂದರ್ಭದಲ್ಲಿ ಬಿಜೆಪಿ ಉಜಿರೆ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಯಶವಂತ್, ಮಂಡಲ ಕೋಶಾಧಿಕಾರಿ ಜಯಂತ್ ಗೌಡ ಗುರಿಪಳ್ಳ, ನೆರಿಯ ಶಕ್ತಿಕೇಂದ್ರ ಅಧ್ಯಕ್ಷರಾದ ವಿಶ್ವನಾಥ್, ಮುಖಂಡರಾದ ಬಾಬು ಗೌಡರವರು ಉಪಸ್ಥಿತರಿದ್ದರು
- Advertisement -


