Saturday, June 6, 2026
Homeಕರಾವಳಿಬೆಳ್ತಂಗಡಿ : ಉಜಿರೆಯಲ್ಲಿ ವಿವಾಹಿತೆ ಮಹಿಳೆ ನೇಣು ಬಿಗಿದು ಆತ್ಮಹ*ತ್ಯೆ

ಬೆಳ್ತಂಗಡಿ : ಉಜಿರೆಯಲ್ಲಿ ವಿವಾಹಿತೆ ಮಹಿಳೆ ನೇಣು ಬಿಗಿದು ಆತ್ಮಹ*ತ್ಯೆ

- Advertisement -
- Advertisement -

ಬೆಳ್ತಂಗಡಿ : ವಿವಾಹಿತೆ ಮಹಿಳೆ ತಾಯಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಗ್ರಾಮದ ದರ್ಖಾಸ್ ನಿವಾಸಿ ದೇವಪ್ಪ ಬಂಗೇರ ಮತ್ತು ರಾಧ ದಂಪತಿಗಳ ಎರಡನೇ ಪುತ್ರಿ ರಮ್ಯ(32) ಮನೆಯ ಕೋಣೆಯಲ್ಲಿ ಜುಲೈ 12 ರಂದು ಮಧ್ಯಾಹ್ನ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕಳೆದ ಎರಡು ವರ್ಷದ ಹಿಂದೆ ಕೊಯ್ಯೂರು ಗ್ರಾಮದ ಪಾದಡ್ಕ ನಿವಾಸಿ ಲತೀಶ್ ಗೆ ಮದುವೆ ಮಾಡಿಕೊಡಲಾಗಿತ್ತು. ರಮ್ಯ ಬೆಳ್ತಂಗಡಿ ಮುಗುಳಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ರಮ್ಯಾಗೆ ಆರೋಗ್ಯ ಸಮಸ್ಯೆಯಿತ್ತು ಎನ್ನಲಾಗಿದೆ. ತಾಯಿ ಮನೆಗೆ ಬಂದಿದ್ದ ರಮ್ಯ ಆರೋಗ್ಯ ಸಮಸ್ಯೆಯಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಇದೆ ಎನ್ನಲಾಗಿದೆ.

ಮೃತದೇಹವನ್ನು ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇಡಲಾಗಿದ್ದು. ಸ್ಥಳಕ್ಕೆ ಬೆಳ್ತಂಗಡಿ ಕಂದಾಯ ಇಲಾಖೆಯ ಕಂದಾಯ ಇನ್ಸ್ಪೆಕ್ಟರ್ ಪ್ರತೀಶ್ ಮತ್ತು ಬೆಳ್ತಂಗಡಿ ಪೊಲೀಸರು ಭೇಟಿ ನೀಡಿದ್ದು. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆ  ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!