Saturday, April 20, 2024
Homeತಾಜಾ ಸುದ್ದಿರಾಜ್ಯದಲ್ಲಿ ದಿನೇ ದಿನೇ ಕೊರೋನಾ ಪ್ರಕರಣಗಳ ಸಂಖ್ಯೆ: ರಾಜ್ಯ ಸರ್ಕಾರದಿಂದ ರಾಜ್ಯಾದ್ಯಂತ ಮಾಸ್ಕ್ ಕಡ್ಡಾಯಗೊಳಿಸಿ ಆದೇಶ

ರಾಜ್ಯದಲ್ಲಿ ದಿನೇ ದಿನೇ ಕೊರೋನಾ ಪ್ರಕರಣಗಳ ಸಂಖ್ಯೆ: ರಾಜ್ಯ ಸರ್ಕಾರದಿಂದ ರಾಜ್ಯಾದ್ಯಂತ ಮಾಸ್ಕ್ ಕಡ್ಡಾಯಗೊಳಿಸಿ ಆದೇಶ

spot_img
- Advertisement -
- Advertisement -

ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಕೊರೋನಾ ಸೋಂಕಿನ  ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿವೆ. ಈ ಹಿನ್ನಲೆಯಲ್ಲಿಯೇ ಇದೀಗ ರಾಜ್ಯ ಸರ್ಕಾರದಿಂದ ರಾಜ್ಯಾದ್ಯಂತ ಮಾಸ್ಕ್ ಕಡ್ಡಾಯಗೊಳಿಸಿ ಆದೇಶಿಸಿದೆ.

ಇಂದು ಕೋವಿಡ್ ನಿಯಂತ್ರಣ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್  ಮಾತನಾಡಿ, ರಾಜ್ಯದಲ್ಲಿ ಇನ್ಮುಂದೆ ಮಾಸ್ಕ್ ಎಲ್ಲರೂ ಧರಿಸುವುದು ಕಡ್ಡಾಯವಾಗಿದೆ ಎಂದು ತಿಳಿಸಿದರು.

ಕೊರೋನಾ ಹೆಚ್ಚಳ ಕಾರಣದಿಂದಾಗಿ 60 ವರ್ಷ ಮೇಲ್ಪಟ್ಟವರು ತಪ್ಪದೇ ಶೀಘ್ರವೇ 3ನೇ ಬೂಸ್ಟರ್ ಡೋಸ್ ಲಸಿಕೆಯನ್ನು ಪಡೆಯಬೇಕು. ಇಂದಿನ ಸಭೆಯಲ್ಲಿ ಮಂಕಿಪಾಕ್ಸ್ ನಿಯಂತ್ರಣ ಕುರಿತಂತೆಯೂ ಚರ್ಚಿಸಲಾಗಿದೆ ಎಂದು ಹೇಳಿದರು.

ಕರ್ನಾಟಕದಲ್ಲಿ ಮಂಕಿಪಾಕ್ಸ್ ಪ್ರಕರಣಗಳು ವರದಿಯಾಗಿಲ್ಲ. ಈ ಸೋಂಕಿನ ಬಗ್ಗೆ ಕಟ್ಟೆಚ್ಚರ ವಹಿಸಲಾಗಿದೆ. ಗಡಿ ಜಿಲ್ಲೆಗಳಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಮಳೆಗಾಲದಲ್ಲಿ ಹೆಚ್ಚಳವಾಗುತ್ತಿರುವಂತ ಮಲೇರಿಯಾ ನಿಯಂತ್ರಣಕ್ಕೂ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.

- Advertisement -
spot_img

Latest News

error: Content is protected !!