- Advertisement -
- Advertisement -
ಸಂಪಾಜೆ : ದೇಶಕ್ಕೆ ಮಾರಕ ಕೊರೊನಾ ಸೋಂಕು ಹಬ್ಬಿರುವುದರಿಂದ ಗ್ರಾಮ ವ್ಯಾಪ್ತಿಯಲ್ಲಿ ಹಗಲಿರುಳು ಶ್ರಮಿಸುತ್ತಿರುವ ವಿವಿಧ ಇಲಾಖೆಗಳ ಕಾರ್ಯಕರ್ತರಿಗೆ ಕೊಡಗು ಗಡಿ ಭಾಗದ ಸಂಪಾಜೆ ಗ್ರಾಮ ಪಂಚಾಯತ್ ವತಿಯಿಂದ ಅಂಗನವಾಡಿ ಕೇಂದ್ರದ ಕಾರ್ಯಕರ್ತೆಯರಿಗೆ ಹಾಗೂ ಆಶಾ ಕಾರ್ಯಕರ್ತೆಯರಿಗೆ, ಅರಣ್ಯ ಇಲಾಖೆ, ಆರಕ್ಷಕ ಠಾಣಾ ಸಿಬ್ಬಂದಿ, ಆರೋಗ್ಯ ಇಲಾಖೆ ಸಿಬ್ಬಂದಿಗಳಿಗೆ ಮಾಸ್ಕ್ ವಿತರಣೆಯನ್ನು ಮಾಡಲಾಯಿತು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ಕುಮಾರ್ ಚೆದ್ಕಾರ್, ಅಭಿವೃದ್ಧಿ ಅಧಿಕಾರಿ ಶ್ರೀಮತಿ ಶೋಭರಾಣಿ, ಉಪಾಧ್ಯಕ್ಷರಾದ ಶ್ರೀ ಸುಂದರ್ ಬಿಸಿಲುಮನೆ, ಪಂಚಾಯತ್ ಸದಸ್ಯರಾದ ಶ್ರೀಮತಿ ರಮಾದೇವಿ ಬಾಲಚಂದ್ರ ಕಳಗಿ ಉಪಸ್ಥಿತರಿದ್ದರು
- Advertisement -