Wednesday, June 24, 2026
Homeಕರಾವಳಿಮಾಸ್ಕ್‌ಮ್ಯಾನ್‌ ಚಿನ್ನಯ್ಯ ಬಂಧನ: ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗಡೆ ಮೊದಲ ಪ್ರತಿಕ್ರಿಯೆ

ಮಾಸ್ಕ್‌ಮ್ಯಾನ್‌ ಚಿನ್ನಯ್ಯ ಬಂಧನ: ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗಡೆ ಮೊದಲ ಪ್ರತಿಕ್ರಿಯೆ

- Advertisement -
- Advertisement -

ಧರ್ಮಸ್ಥಳ:ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗಡೆ ಅವರು ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿದ್ದಾಗಿ ಹೇಳಿದ್ದ ಮಾಸ್ಕ್‌ಮ್ಯಾನ್‌ ಚಿನ್ನಯ್ಯನ ಬಂಧನವಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ʻಸತ್ಯವು ಒಂದೊಂದಾಗಿ ಹೊರಗೆ ಬರುತ್ತಿವೆ. ಬೆಂಬಲಕ್ಕೆ ನಿಂತ ಎಲ್ಲರಿಗೂ ಧನ್ಯವಾದಗಳು. ಈ ಬಗ್ಗೆ ನಾನು ಹೆಚ್ಚಿಗೆ ಏನನ್ನೂ ಮಾತನಾಡುವುದಿಲ್ಲ. ಎಸ್‌ಐಟಿ ತನಿಖೆ ಹಂತದಲ್ಲಿರುವುದರಿಂದ ಈ ಬಗ್ಗೆ ನಾನು ಮಾತನಾಡಲ್ಲ. ಇನ್ನು ಧರ್ಮಸ್ಥಳಕ್ಕೆ ಬಂದು ಬೆಂಬಲ ಸೂಚಿಸಿರುವ ಎಲ್ಲರಿಗೂ ಧನ್ಯವಾದಗಳು. ನಿಮ್ಮೆಲ್ಲರ ಪ್ರೀತಿ ವಿಶ್ವಾಸ ಹೀಗೆಯೇ ಇರಲಿ ಎಂದು ನಾನು ಆಶಿಸುತ್ತೇನೆ,ʼ ಎಂದು ಹೇಳಿದರು.

- Advertisement -

Latest News

error: Content is protected !!