Friday, June 5, 2026
Homeಕರಾವಳಿಸುಳ್ಯ; ಕಳಂಜದಲ್ಲಿ ಮಸೂದ್ ಕೊಲೆ ಪ್ರಕರಣ; 7ನೇ ಆರೋಪಿಗೆ ಷರತ್ತುಬದ್ಧ ಜಾಮೀನು

ಸುಳ್ಯ; ಕಳಂಜದಲ್ಲಿ ಮಸೂದ್ ಕೊಲೆ ಪ್ರಕರಣ; 7ನೇ ಆರೋಪಿಗೆ ಷರತ್ತುಬದ್ಧ ಜಾಮೀನು

- Advertisement -
- Advertisement -

ಸುಳ್ಯ; ಕಳೆದ ವರ್ಷ ಜುಲೈನಲ್ಲಿ ಕಳಂಜದಲ್ಲಿ ನಡೆದ ಮಸೂದ್ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೊನ್ನೆಯಷ್ಟೇ 8ನೇ ಆರೋಪಿಗೆ ಜಾಮೀನು ಮಂಜೂರಾಗಿತ್ತು. ಇದರ ಬೆನ್ನಲ್ಲೇ ಪ್ರಕರಣದ 7ನೇ ಆರೋಪಿಗೆ ಷರತ್ತುಬದ್ಧ ಜಾಮೀನು ಮಂಜೂರಾಗಿದೆ.

ಪ್ರಕರಣದ 7ನೇ ಆರೋಪಿಯಾಗಿರುವ ಜಿಮ್‌ ರಂಜಿತ್ ಜಾಮೀನು ಕೋರಿ ವಕೀಲರ ಮೂಲಕ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿದ್ದ. ಅದರಂತೆ ಆ.೪ ರಂದು ಷರತ್ತುಬದ್ಧ ಜಾಮೀನು ದೊರೆತಿದೆ.

2022 ಜು.19ರಂದು ಕಳಂಜದಲ್ಲಿ 8 ಮಂದಿ ಯುವಕರ ತಂಡ ಮಸೂದ್ ಎಂಬ ಯುವಕನ ಮೇಲೆ ಹಲ್ಲೆ ನಡೆಸಿದ್ದರು. ಈ ವೇಳೆ ಗಂಭೀರ ಗಾಯಗೊಂಡ ಮಸೂದ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದರು. ಪ್ರಕರಣಕ್ಕೆ ಸಂಬಂಧಿಸಿ 8 ಮಂದಿ‌ ಆರೋಪಿಗಳನ್ನು ಬೆಳ್ಳಾರೆ ಪೋಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು.

ಆರೋಪಿಯ ಪರವಾಗಿ ಹಿರಿಯ ವಕೀಲರಾದ ಅರುಣ್ ಶ್ಯಾಮ್ ಪುತ್ತೂರು ವಾದ ಮಂಡಿಸಿದರು. ವಕೀಲರಾದ ಸುಯೋಗ್ ಹೇರಳೆ ಹಾಗೂ ನಿಶಾಂತ್ ವಕಾಲತ್ತು ಹಾಕಿದ್ದರು.

- Advertisement -

Latest News

error: Content is protected !!