Wednesday, July 15, 2026
Homeಕರಾವಳಿಸುಳ್ಯ: ಕಳಂಜದಲ್ಲಿ ಮಸೂದ್ ಕೊಲೆ ಪ್ರಕರಣ; ಎಂಟನೇ ಆರೋಪಿಗೆ ಹೈಕೋರ್ಟ್ ನಿಂದ ಷರತ್ತುಬದ್ಧ ಜಾಮೀನು

ಸುಳ್ಯ: ಕಳಂಜದಲ್ಲಿ ಮಸೂದ್ ಕೊಲೆ ಪ್ರಕರಣ; ಎಂಟನೇ ಆರೋಪಿಗೆ ಹೈಕೋರ್ಟ್ ನಿಂದ ಷರತ್ತುಬದ್ಧ ಜಾಮೀನು

- Advertisement -
- Advertisement -

ಸುಳ್ಯ: ಕಳಂಜದಲ್ಲಿ ಮಸೂದ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಟನೇ ಆರೋಪಿಗೆ ಹೈಕೋರ್ಟ್ ನಿಂದ ಷರತ್ತುಬದ್ಧ ಜಾಮೀನು ದೊರೆತಿದೆ.

ಪ್ರಕರಣದ 8ನೇ ಆರೋಪಿ ಭಾಸ್ಕರ ಕೆ.ಎಂ. ಜಾಮೀನು ಕೋರಿ ವಕೀಲರ ಮೂಲಕ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಆರೋಪಿಗೆ  ಆ.3 ರಂದು ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಆರೋಪಿಯ ಪರ ಹಿರಿಯ ವಕೀಲರಾದ ಅರುಣ್ ಶ್ಯಾಮ್ ಪುತ್ತೂರು ವಾದ ಮಂಡಿಸಿದರು. ವಕೀಲರಾದ ಸುಯೋಗ್ ಹೇರಳೆ ಹಾಗೂ ನಿಶಾಂತ್ ವಕಾಲತ್ತು ಹಾಕಿದ್ದರು.

2022 ಜು.19ರಂದು ಕಳಂಜದಲ್ಲಿ 8 ಮಂದಿ ಯುವಕರ ತಂಡ ಮಸೂದ್ ಎಂಬ ಯುವಕನ ಮೇಲೆ ಹಲ್ಲೆ ನಡೆಸಿದ್ದರು. ಈ ವೇಳೆ ಗಂಭೀರ ಗಾಯಗೊಂಡ ಮಸೂದ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದರು. ಪ್ರಕರಣಕ್ಕೆ ಸಂಬಂಧಿಸಿ 8 ಮಂದಿ‌ ಆರೋಪಿಗಳನ್ನು ಬೆಳ್ಳಾರೆ ಪೋಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು.

- Advertisement -

Latest News

error: Content is protected !!