Tuesday, May 14, 2024
Homeಕರಾವಳಿಧರ್ಮಸ್ಥಳದಲ್ಲಿ ಐವತ್ತನೇ ಉಚಿತ ಸಾಮೂಹಿಕ ವಿವಾಹ ಸಮಾರಂಭ : ನವ ಜೀವನಕ್ಕೆ ಕಾಲಿಟ್ಟ 183 ಜೋಡಿಗಳು

ಧರ್ಮಸ್ಥಳದಲ್ಲಿ ಐವತ್ತನೇ ಉಚಿತ ಸಾಮೂಹಿಕ ವಿವಾಹ ಸಮಾರಂಭ : ನವ ಜೀವನಕ್ಕೆ ಕಾಲಿಟ್ಟ 183 ಜೋಡಿಗಳು

spot_img
- Advertisement -
- Advertisement -

ಧರ್ಮಸ್ಥಳ: ಐವತ್ತನೇ ಉಚಿತ ಸಾಮೂಹಿಕ ವಿವಾಹ ಸಮಾರಂಭ ಧರ್ಮಸ್ಥಳದಲ್ಲಿ ಅದ್ಧೂರಿಯಾಗಿ ನಡೆಯಿತು. ಸಂಜೆ 6-50 ರ ಗೋಧೂಳಿ ಲಗ್ನದಲ್ಲಿ 183 ಜೋಡಿಗಳು ಹೊಸ ಜೀವನಕ್ಕೆ ಕಾಲಿಟ್ಟರು.  ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು, ಕಂದಾಯ ಸಚಿವ ಆರ್. ಅಶೋಕ್, ಚಲನಚಿತ್ರ ನಟ ಗಣೇಶ್ ಮತ್ತು ಗಣ್ಯರು ಮಂಗಲ ಸೂತ್ರ ನೀಡಿ ಶುಭ ಹಾರೈಸಿದರು.

 ಬೆಳಗ್ಗೆ ಹೆಗ್ಗಡೆಯವರ ನಿವಾಸದಲ್ಲಿ ವಧುವಿಗೆ ಸೀರೆ ಮತ್ತು ರವಿಕೆ ಹಾಗೂ ವರನಿಗೆ ಧೋತಿ, ಶಾಲು ವಿತರಿಸಿದರು. ಸಂಜೆ 5 ಗಂಟೆಗೆ ಭವ್ಯ ಮೆರವಣಿಗೆಯಲ್ಲಿ ವಧೂ-ವರರು ದೇವಸ್ಥಾನಕ್ಕೆ ಪ್ರದಕ್ಷಿಣೆ ಬಂದು ಅಮೃತವರ್ಷಿಣಿ ಸಭಾಭವನದಲ್ಲಿ ಮದುವೆ ಮಂಟಪಕ್ಕೆ ಪ್ರವೇಶಿಸಿದರು. ಅಲ್ಲಿ ಹೆಗ್ಗಡೆಯವರು ಮತ್ತು ಗಣ್ಯ ಅತಿಥಿಗಳು ಮಂಗಳಸೂತ್ರ ವಿತರಿಸಿ ಶುಭ ಹಾರೈಸಿದರು. 6.50 ರ ಗೋಧೂಳಿ ಲಗ್ನ ಸುಮೂಹರ್ತದಲ್ಲಿ ವೇದಘೋಷ, ಮಂತ್ರ, ಪಠಣದೊಂದಿಗೆ ಮಂಗಳವಾದ್ಯಗಳ ನಿನಾದದೊಂದಿಗೆ ಜಾತಿವಾರು ಸಂಪ್ರದಾಯದಂತೆ ಧಾರ್ಮಿಕ ವಿಧಿ-ವಿಧಾನಗಳನ್ನು ನಡೆಸಿ ಮಂತ್ರಾಕ್ಷತೆ, ಹಾರ ವಿನಿಮಯ ಹಾಗೂ ಮಾಂಗಲ್ಯ ಧಾರಣೆಯೊಂದಿಗೆ ವಿವಾಹ ನೆರವೇರಿಸಲಾಯಿತು.

ನೂತನ ದಂಪತಿಯಿಂದ ಪ್ರತಿಜ್ಞಾ ವಿಧಿ: ಮಂಗಳ ಮುಹೂರ್ತದಲ್ಲಿ ವಧೂವರರಾಗಿ ಪವಿತ್ರ ಬಾಂಧವ್ಯವನ್ನು ಹೊಂದಿರುವ ನಾವು ಮುಂದೆ ಜೀವನದುದ್ದಕ್ಕೂ ಧರ್ಮ, ಅರ್ಥ, ಕಾಮದಲ್ಲಿ ಸಹಚರರಾಗಿ, ಪರಸ್ಪರ ಪ್ರೀತಿ-ವಿಶ್ವಾಸದಿಂದ ಒಬ್ಬರಿಗೊಬ್ಬರು ವಂಚನೆ ಮಾಡದೆ ಹಾಗೂ ಯಾವುದೇ ದುರಭ್ಯಾಸಗಳಿಗೂ ತುತ್ತಾಗದೆ ಬದುಕುತ್ತೇವೆ ಎಂದು ಭಗವಾನ್ ಶ್ರೀ ಮಂಜುನಾಥ ಸ್ವಾಮಿಯ ದಿವ್ಯ ಸನ್ನಿಧಿಯಲ್ಲಿ ಮತ್ತು ಪೂಜ್ಯ ಹೆಗ್ಗಡೆಯವರ ಸಮಕ್ಷಮದಲ್ಲಿ ಪ್ರಮಾಣವಚನ ಬದ್ಧರಾಗುತ್ತಿದ್ದೇವೆ ಎಂದು ಇದೇ ವೇಳೆ ನೂತನ ಜೋಡಿಗಳು ಪ್ರತಿಜ್ಞೆ ಮಾಡಿದ್ರು.

ಇದೇ ವೇಳೆ ಮಾತನಾಡಿದ ಕಂದಾಯ ಸಚಿವ ಆರ್. ಅಶೋಕ್ ಬದುಕಿನಲ್ಲಿ ಆಸ್ತಿ, ಅಂತಸ್ತು ಮುಖ್ಯ ಅಲ್ಲ. ಪ್ರೀತಿ- ವಿಶ್ವಾಸವೇ ಮುಖ್ಯ. ಬಡತನ – ಸಿರಿತನ ಶಾಶ್ವತವಲ್ಲ. ಪ್ರೀತಿ-ವಿಶ್ವಾಸವಿಲ್ಲದಿದ್ದರೆ ಬದುಕಿಗೆ ಅರ್ಥವಿಲ್ಲ ಎಂದರು. ಗಂಡ-ಹೆಂಡತಿ ಸದಾ ಪರಸ್ಪರ ಅರ್ಥೈಸಿಕೊಂಡು ಪ್ರೀತಿ-ವಿಶ್ವಾಸದಿಂದ ಸಾರ್ಥಕ ಜೀವನ ನಡೆಸಬೇಕು ಎಂದು ಹಾರೈಸಿದರು.

ಮನೆಬಾಗಿಲಿಗೆ ಸರ್ಕಾರದ ಸೇವೆ : 24 ಗಂಟೆಗಳೊಳಗೆ ಮನೆ ಬಾಗಿಲಿಗೆ ಸರ್ಕಾರದಿಂದ ದೂರವಾಣಿ ಮೂಲಕ ವೃದ್ಧಾಪ್ಯ ವೇತನ ನೀಡುವ ಕಾರ್ಯಕ್ರಮ ಸದ್ಯದಲ್ಲಿಯೇ ಜಾರಿಗೆ ಬರಲಿದೆ ಎಂದು ಇದೇ ವೇಳೆ  ಸಚಿವರು ಪ್ರಕಟಿಸಿದರು. ಮುಖ್ಯಮಂತ್ರಿಯವರ ನೇತೃತವ್ದಲ್ಲಿ ಈ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ. ಎಲ್ಲರೂ ಸತ್ಯ, ಧರ್ಮದ ಹಾದಿಯಲ್ಲಿ ನಡೆದು ಸುಖ-ಶಾಂತಿ ಮತ್ತು ನೆಮ್ಮದಿಯ ಜೀವನ ನಡೆಸುವಂತಾಗಲಿ ಎಂದು ಅವರು ಹಾರೈಸಿದರು. ಚಲನಚಿತ್ರ ನಟ ಗಣೇಶ್ ವರನಟ ರಾಜ್‌ಕುಮಾರ್ ಹಾಡಿದ “ಹೊಸ ಬಾಳಿನ ಹೊಸಿಲಲಿ ನಿಂತಿರುವ ಹೊಸ ಜೋಡಿಗೆ ಹಾಡನ್ನು ಸುಶ್ರಾವ್ಯವಾಗಿ ಹಾಡಿ ನೂತನ ದಂಪತಿಗಳಿಗೆ ಶುಭ ಕೋರಿದರು.

ಇನ್ನು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡಿ, ಸಾಮೂಹಿಕ ವಿವಾಹ ಸರಳ ಜೀವನಕ್ಕೆ ನಾಂದಿಯಾಗಬೇಕು. ಮದುವೆಯ ಹೆಸರಿನಲ್ಲಿ ದುಂದು ವೆಚ್ಚ ಮಾಡಬಾರದು. ವಿವಾಹಕ್ಕಾಗಿ ಮಾಡುವ ದುಂದು ವೆಚ್ಚ, ವರದಕ್ಷಿಣೆ, ಜೀತಪದ್ಧತಿ ಮೊದಲಾದ ಸಮಸ್ಯೆಗಳನ್ನು ನಿವಾರಿಸಲಿಕ್ಕಾಗಿ ಸಾಮೂಹಿಕ ವಿವಾಹ ಯೋಜನೆಯನ್ನು ಧರ್ಮಸ್ಥಳದಲ್ಲಿ ಆರಂಭಿಸಲಾಯಿತು. ಇಂದು ಜಾತಿ-ಮತ, ಅಂತಸ್ತಿನ ಬೇಧ ಮರೆತು 60 ಜೊತೆ ಅಂತರ್ಜಾತೀಯ ವಿವಾಹವಾದ ಬಗ್ಗೆ ಅವರು ಮೆಚ್ಚುಗೆ ವ್ಯಕ್ತ ಪಡಿಸಿದರು. ಇವರಿಗೆ ವಿವಾಹ ನೋಂದಣಿ ಪ್ರಮಾಣ ಪತ್ರ ನೀಡಿ ಅದು ಮುಂದೆ ಉದ್ಯೋಗ, ಶಿಕ್ಷಣ ಹಾಗೂ ಸರ್ಕಾರದ ನೆರವು ಪಡೆಯಲು ಸಹಕಾರಿಯಾಗಿದೆ ಎಂದು ಹೇಳಿದರು

 ಶಾಸಕರುಗಳಾದ ಕೃಷ್ಣಪ್ಪ ಮತ್ತು ಹರೀಶ್ ಪೂಂಜ, ಹೇಮಾವತಿ ವಿ. ಹೆಗ್ಗಡೆ, ಡಿ. ಸುರೇಂದ್ರ ಕುಮಾರ್, ಡಿ. ಹರ್ಷೇಂದ್ರ ಕುಮಾರ್ ಮತ್ತು ಸುಪ್ರಿಯಾ ಹರ್ಷೇಂದ್ರ ಕುಮಾರ್ ಈ ವೇಳೆ ಉಪಸ್ಥಿತರಿದ್ದರು.

- Advertisement -
spot_img

Latest News

error: Content is protected !!