- Advertisement -
- Advertisement -
ಬಳ್ಳಾರಿ: ಬಳ್ಳಾರಿ ಜಿಲ್ಲೆ ಹಗರಿಬೊಮ್ಮನಹಳ್ಳಿ ತಾಲೂಕಿನ ಬಲ್ಲಾಹುಣಸಿ ಗ್ರಾಮದಲ್ಲಿ ಇರುವ ಮಸೀದಿಯಲ್ಲಿ ಲಾಕ್ಡೌನ್ ನಿಯಮ ಉಲ್ಲಂಘಿಸಿ ಸಾಮೂಹಿಕ ಪ್ರಾರ್ಥನೆ ನಡೆಸುತ್ತಿದ್ದ 21 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ.
ಮಸೀದಿಯಲ್ಲಿ ಶುಕ್ರವಾರ ಮಧ್ಯಾಹ್ನ ಗುಂಪಾಗಿ ಪ್ರಾರ್ಥನೆ ಸಲ್ಲಿಸುತ್ತಿದ್ದ 21 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಅವರನ್ನು ಕ್ವಾರಂಟೈನ್ ನಲ್ಲಿ ಇಟ್ಟಿದ್ದಾರೆ.
ಲಾಕ್ ಡೌನ್ ಇದ್ರೂ ಸಾಮೂಹಿಕ ನಮಾಜ್ ಮಾಡುತ್ತಿರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು ಪರಿಶೀಲನೆ ನಡೆಸಿದ್ದು, 21 ಮಂದಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ಹೇಳಲಾಗಿದೆ.
- Advertisement -