ಮಂಗಳೂರು: ರಾಮ ಸೇನಾ ಸಂಘಟನೆಯು ಮಂಗಳೂರಿನ ಬಿಜೈ ಕೆಎಸ್ಆರ್ ಟಿಸಿ ಬಳಿ ಇರುವ ಮಸಾಜ್ ಸೆಂಟರ್ ಮೇಲೆ ದಾಳಿ ನಡೆಸಿ ಪೀಠೋಪಕರಣಗಳನ್ನು ಧ್ವಂಸಗೊಳಿಸಿರುವ ಘಟನೆ ಜ.23 ಗುರುವಾರದಂದು ನಡೆದಿದೆ.
ಪ್ರಸಾದ್ ಅತ್ತಾವರ ನೇತೃತ್ವದ ರಾಮ ಸೇನಾ ಸಂಘಟನೆ ದಾಳಿ ನಡೆಸಿದ್ದು, ಇದಕ್ಕೆ ಮುಖ್ಯ ಕಾರಣ ಮಸಾಜ್ ಸೆಂಟರ್ ನಲ್ಲಿ ನಡೆಯುತ್ತಿರುವ ಅನೈತಿಕ ಚಟುವಟಿಕೆಯೆಂದು ಆರೋಪಿಸಲಾಗಿದೆ. ದಾಳಿಯ ವೇಳೆ ಮಸಾಜ್ ಸೆಂಟರ್ ನ ಪೀಠೋಪಕರಣಗಳನ್ನು ಧ್ವಂಸಗೊಳಿಸಿ ಆಕ್ರೋಶ ಹೊರಹಾಕಿದ್ದಾರೆ.
ಅಷ್ಟೇಅಲ್ಲದೆ ರಾಮ ಸೇನೆಯು ಮಂಗಳೂರು ನಗರದಾದ್ಯಂತ ಇರೋ ಮಸಾಜ್ ಸೆಂಟರ್ ಗಳನ್ನು ಮುಚ್ಚುವಂತೆ ಆಗ್ರಹಿಸಿದೆ ಎಂದು ತಿಳಿದು ಬಂದಿದೆ.
ಇನ್ನು ಈ ದಾಳಿ ಕುರಿತಂತೆ ಪ್ರತಿಕ್ರಯಿಸಿರುವ ಶ್ರೀರಾಮಸೇನೆ ಮಂಗಳೂರು ವಿಭಾಗ ಅಧ್ಯಕ್ಷ ಜಯರಾಮ ಅಂಬೆಕಲ್ಲು, ಮಂಗಳೂರಿನಲ್ಲಿ ನಡೆದಿರುವ ಮಸಾಜ್ ಸೆಂಟರ್ ದಾಳಿಗೂ ಶ್ರೀರಾಮಸೇನೆಗೂ ಯಾವುದೇ ರೀತಿಯ ಸಂಭಂದವಿಲ್ಲ. ಈಗಾಗಲೇ ಹೆಚ್ಚಿನ ಪದಾಧಿಕಾರಿಗಳುಅಯೋಧ್ಯೆ ಹಾಗೂ ಕುಂಭ ಮೇಳದ ಪ್ರವಾಸದಲ್ಲಿದ್ದಾರೆ. ಇನ್ನು ಹಲವು ಪದಾಧಿಕಾರಿಗಳು, ಕಾರ್ಯಕರ್ತರು ಪ್ರಮೋದ್ ಮುತಾಲಿಕರ 70 ನೇ ವರ್ಷದ ಜನ್ಮ ದಿನಾಚರಣೆ ಪ್ರಯುಕ್ತ ಪೂಜೆ ಹವನ ಹಾಗೂ ಇನ್ನಿತರ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಸ್ಪಷ್ಟನೆಯನ್ನ ನೀಡಿದ್ದಾರೆ.