
ಸಕಲೇಶಪುರ ತಾಲೂಕಿನ ಮೊಗನಹಳ್ಳಿ ಗ್ರಾಮದ ಸಮೀಪವಿರುವ ಎತ್ತಿನಹೊಳೆ ಯೋಜನೆಯ ಪಂಪ್‌ಹೌಸ್‌ನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಬೆಂಕಿಯ ತೀವ್ರತೆಗೆ ಇಡೀ ಕಟ್ಟಡ ಹಾಗೂ ಒಳಗಿದ್ದ ಬೆಲೆಬಾಳುವ ಯಂತ್ರೋಪಕರಣಗಳು ಸುಟ್ಟು ಕರಕಲಾಗಿವೆ. ಘಟನೆಯ ವೇಳೆ ಸ್ಥಳದಲ್ಲಿದ್ದ ಮೂವರು ಸಿಬ್ಬಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಪಂಪ್‌ಹೌಸ್‌ನಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದ್ದು, ಕೆಲವೇ ಕ್ಷಣಗಳಲ್ಲಿ ಬೆಂಕಿ ಇಡೀ ಕಟ್ಟಡಕ್ಕೆ ವ್ಯಾಪಿಸಿದೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಎಚ್ಚೆತ್ತುಕೊಂಡ ಸಿಬ್ಬಂದಿ ತಕ್ಷಣ ಹೊರಗೆ ಓಡಿ ಬಂದಿದ್ದರಿಂದ ದೊಡ್ಡ ಅನಾಹುತ ತಪ್ಪಿದೆ.
ಸಾವಿರಾರು ಕೋಟಿ ರೂಪಾಯಿ ವೆಚ್ಚದ ಮಹತ್ವದ ಎತ್ತಿನಹೊಳೆ ಯೋಜನೆಯ ಪಂಪ್‌ಹೌಸ್‌ನಲ್ಲೇ ಇಂತಹ ಅವಘಡ ಸಂಭವಿಸಿರುವುದು ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ. ಘಟಕದ ನಿರ್ವಹಣೆ ಮತ್ತು ಅಧಿಕಾರಿಗಳ ಮೇಲ್ವಿಚಾರಣೆಯಲ್ಲಿ ಲೋಪವಾಗಿದೆಯೇ ಎಂಬ ಪ್ರಶ್ನೆಗಳೂ ಎದ್ದಿವೆ.
ಘಟನೆಗೆ ನಿಖರ ಕಾರಣ ತಿಳಿಯಲು ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ನಿರ್ವಹಣೆಯಲ್ಲಿ ನಿರ್ಲಕ್ಷ್ಯ ನಡೆದಿದೆಯೇ ಎಂಬ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.


