Thursday, June 4, 2026
Homeತಾಜಾ ಸುದ್ದಿಕೇರಳದ ವಯನಾಡಿನಲ್ಲಿ ಭಾರೀ ಭೂ ಕುಸಿತ; ಮಕ್ಕಳು ಸೇರಿದಂತೆ ಮೃತಪಟ್ಟವರ ಸಂಖ್ಯೆ 66ಕ್ಕೆ ಏರಿಕೆ

ಕೇರಳದ ವಯನಾಡಿನಲ್ಲಿ ಭಾರೀ ಭೂ ಕುಸಿತ; ಮಕ್ಕಳು ಸೇರಿದಂತೆ ಮೃತಪಟ್ಟವರ ಸಂಖ್ಯೆ 66ಕ್ಕೆ ಏರಿಕೆ

- Advertisement -
- Advertisement -

ಕೇರಳದ ವಯನಾಡಿನಲ್ಲಿ ಭಾರೀ ಭೂ ಕುಸಿತವಾಗಿದ್ದು,  ಮಕ್ಕಳು ಸೇರಿದಂತೆ ಮೃತಪಟ್ಟವರ ಸಂಖ್ಯೆ 66ಕ್ಕೆ ಏರಿಕೆಯಾಗಿದೆ.

ಭೂ ಕುಸಿತವು ವೈತಿರಿ ತಾಲ್ಲೂಕಿನ ಮೆಪ್ಪಾಡಿ ಪಂಚಾಯತ್ ನಲ್ಲಿ ಮಂಗಳವಾರ ಮುಂಜಾನೆ 3.49 ರ ಸುಮಾರಿಗೆ ಸಂಭವಿಸಿದೆ. ಕನಿಷ್ಠ 400ಕ್ಕೂ ಹೆಚ್ಚು ಕುಟುಂಬಗಳು ದುರಂತದಲ್ಲಿ ಸಿಲುಕಿವೆ ಎಂದು ಹೇಳಲಾಗುತ್ತದೆ.  

ಈಗಾಗಲೇ ಪೋತುಕಲ್ ಗ್ರಾಮದ ಬಳಿಯ ನದಿಯ ದಡದಿಂದ ಐದು ವರ್ಷದ ಮಗು ಸೇರಿದಂತೆ ಮೂರು ಶವಗಳನ್ನು ಹೊರತೆಗೆಯಲಾಗಿದೆ. ಮುಂಡಕ್ಕೈ, ಚೂರಲ್ಮಲಾ, ಅಟ್ಟಮಾಲ ಮತ್ತು ನೂಲ್ಪುಳ ಗ್ರಾಮಗಳು ಭೂಕುಸಿತದಿಂದ ಹಾನಿಗೊಳಗಾಗಿ ಸಂಪರ್ಕ ಕಡಿತಗೊಂಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಕುರಿತಂತೆ ವಯನಾಡ್ ಜಿಲ್ಲಾಧಿಕಾರಿ ಮೇಘಶ್ರೀ ಡಿ ಆರ್, ಭೂಕುಸಿತ ಪ್ರದೇಶಗಳಲ್ಲಿ ವಿಪತ್ತು ಪರಿಹಾರ ಕಾರ್ಯ ಪ್ರಗತಿಯಲ್ಲಿದ್ದು, ಎನ್‌ಡಿಆರ್‌ಎಫ್, ಅಗ್ನಿಶಾಮಕ ದಳ, ಪೊಲೀಸ್ ಮತ್ತು ಅರಣ್ಯ, ಕಂದಾಯ ಮತ್ತು ಸ್ಥಳೀಯ ಸ್ವ-ಸರ್ಕಾರ ಇಲಾಖೆಗಳಿಂದ ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.

ಘಟನಾ ಸ್ಥಳದಲ್ಲಿ ಸರ್ಕಾರಿ ಸಂಸ್ಥೆಗಳ ಜೊತೆಗೆ ಸ್ವಯಂಸೇವಕರು ಮತ್ತು ಸ್ಥಳೀಯ ನಿವಾಸಿಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿದ್ದಾರೆ.

- Advertisement -

Latest News

error: Content is protected !!