Tuesday, July 1, 2025
Homeಇತರಬೆಳ್ತಂಗಡಿ: ಹಿಂದೂ ದೇವಾಲಯಗಳನ್ನು ಕೆಡವುತ್ತಿರುವ ಸರ್ಕಾರದ ವಿರುದ್ಧ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಕಡೆಯಿಂದ ಬೃಹತ್...

ಬೆಳ್ತಂಗಡಿ: ಹಿಂದೂ ದೇವಾಲಯಗಳನ್ನು ಕೆಡವುತ್ತಿರುವ ಸರ್ಕಾರದ ವಿರುದ್ಧ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಕಡೆಯಿಂದ ಬೃಹತ್ ಪ್ರತಿಭಟನೆ…!

spot_img
- Advertisement -
- Advertisement -

ಬೆಳ್ತಂಗಡಿ: ಸುಪ್ರಿಂ ಕೋರ್ಟ್ ಹೊರಡಿಸಿದ ಆದೇಶದ ಪ್ರಕಾರ ಅಕ್ರಮ ಜಾಗದಲ್ಲಿರುವ ದೇವಸ್ಥಾನಗಳನ್ನು ತೆರವುಗೊಳಿಸುವಂತೆ ಹಾಗು ಹಿಂದೂ ದೇವಾಲಯಗಳನ್ನು ಕೆಡವುತ್ತಿರುವ ಸರಕಾರದ ವಿರುದ್ಧ, ಬೆಳ್ತಂಗಡಿ ತಾಲೂಕು ರಾಷ್ಟ್ರೀಯ ಹಿಂದೂ ಜಾಗರಣಾ ವೇದಿಕೆ ವತಿಯಿಂದ ತಾಲೂಕು ಮಿನಿ ವಿಧಾನ ಸೌಧದಲ್ಲಿ ಇಂದು ಬೃಹತ್ ಪ್ರತಿಭಟನೆ ನಡೆಯಿತು.

ಕಾರ್ಯಕ್ರಮಕ್ಕೆ ಮುಂಚಿತವಾಗಿ ರಾಷ್ಟ್ರೀಯ ಹಿಂದೂ ಜಾಗರಣಾ ವೇದಿಕೆ ವತಿಯಿಂದ ಬೆಳ್ತಂಗಡಿ ಅಯ್ಯಪ್ಪ ಮಂದಿರ ಬಳಿಯಿಂದ ತಾಲೂಕು ಮಿನಿ ವಿಧಾನ ಸೌಧದ ವರೆಗೆ ಬೃಹತ್ ಪ್ರತಿಭಟನಾ ರಾಲಿ ನಡೆಯಿತು.

ಸುಪ್ರೀಂ ಕೋರ್ಟ್ ಆದೇಶ ಪಾಲನೆಯ ನೆಪದಲ್ಲಿ ಹಾಗು ಹಿಂದುತ್ವದ ಹೆಸರಿನಲ್ಲಿ ಅಧಿಕಾರ ಪಡೆದು ಹಿಂದೂಗಳ ಧಾರ್ಮಿಕ ಶ್ರದ್ಧಾ ಕೇಂದ್ರಗಳ ಮೇಲೆ ಸರಕಾರ ದಾಳಿ ಮಾಡುತ್ತಿದೆ. ಮೈಸೂರು ಜಿಲ್ಲಾಡಳಿತವು ಇತಿಹಾಸ ಪ್ರಸಿದ್ಧ ದೇವಸ್ಥಾನವನ್ನುರಾತ್ರೋ ರಾತ್ರಿ ಕೆಡವಿ ಹಿಂದೂ ಸಮಾಜ ಬಾಂಧವರ ಮನಸ್ಸಿಗೆ ನೋವಾಗುವ ರೀತಿಯಲ್ಲಿ ವರ್ತಿಸಿದೆ. ಇದೇ ರೀತಿ ಮುಂದುವರಿದಲ್ಲಿ ರಾಜ್ಯದಾದ್ಯಂತ ರಾಷ್ಟ್ರೀಯ ಹಿಂದೂ ಜಾಗರಣಾ ವೇದಿಕೆ ವತಿಯಿಂದ ಉಗ್ರ ಹೋರಾಟ ನಡೆಸಲಾಗುವುದು ರಾಷ್ಟ್ರೀಯ ಹಿಂದೂ ಜಾಗರಣಾ ವೇದಿಕೆಯ ಸ್ಥಾಪಕಾಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿಯವರು ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ್ದಾರೆ.

ರಾಷ್ಟ್ರೀಯ ಹಿಂದೂ ಜಾಗರಣಾ ವೇದಿಕೆ ಗೌರವಾಧ್ಯಕ್ಷ ಹರೀಶ್ ಬರೇಮೇಲು , ಅಧ್ಯಕ್ಷ ಅನಿಲ್ ಕುಮಾರ್, ಕಾರ್ಯದರ್ಶಿ ಸಂದೀಪ್, ಸಂಚಾಲಕ ಮನೋಜ್ ಕುಂಜರ್ಪ ಪ್ರಮುಖರಾದ ಪುಜ್ವಲ್ ಚಂದ್ರಹಾಸ ಜಿಕೆರೆ , ವಂಕಪ್ಪ ಕೋಟ್ಯಾನ್, ಮನೋಹರ ಕನ್ಯಾಡಿ , ಪುಮೋದ್ ಸಾಲ್ಯಾನ್, ನಿಡ್ಲೆ ಗ್ರಾ.ಪಂ. ಸದಸ್ಯ ಜಗದೀಶ್ ನಿಮ್ಮ ಮೊದಲಾದವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

- Advertisement -
spot_img

Latest News

error: Content is protected !!