Friday, July 31, 2026
Homeಕರಾವಳಿಉಡುಪಿಮಣಿಪಾಲದಲ್ಲಿ ಭಾರಿ ಟ್ರಾಫಿಕ್ ಜಾಮ್: ಗಂಟೆಗೂ ಹೆಚ್ಚು ಕಾಲ ಪರದಾಡಿದ ಸವಾರರು

ಮಣಿಪಾಲದಲ್ಲಿ ಭಾರಿ ಟ್ರಾಫಿಕ್ ಜಾಮ್: ಗಂಟೆಗೂ ಹೆಚ್ಚು ಕಾಲ ಪರದಾಡಿದ ಸವಾರರು

- Advertisement -
- Advertisement -

ಉಡುಪಿ: ಮಣಿಪಾಲದ ರಾಷ್ಟ್ರೀಯ ಹೆದ್ದಾರಿ 169(ಎ) ನಲ್ಲಿ ರಸ್ತೆ ಬದಿಯಲ್ಲಿ ಅವೈಜ್ಞಾನಿಕವಾಗಿ ವಾಹನಗಳನ್ನು ನಿಲ್ಲಿಸಿದ್ದರಿಂದ ಶುಕ್ರವಾರ ಸಂಜೆ ಗಂಟೆಗೂ ಹೆಚ್ಚು ಕಾಲ ಭಾರಿ ಟ್ರಾಫಿಕ್ ಜಾಮ್ ಉಂಟಾಯಿತು.

ಗ್ರೀನ್ ಪಾರ್ಕ್‌ನಿಂದ ಸಿಂಡಿಕೇಟ್ ಸರ್ಕಲ್‌ವರೆಗೆ ಕಿಲೋಮೀಟರ್‌ಗಟ್ಟಲೆ ವಾಹನಗಳು ಸಾಲು ಗಟ್ಟಿ ನಿಂತಿದ್ದರಿಂದ, ಕಚೇರಿ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದ ನೌಕರರು ಹಾಗೂ ಸಾರ್ವಜನಿಕರು ತೀವ್ರ ಪರದಾಟ ನಡೆಸಿದರು.

ಆ್ಯಂಬುಲೆನ್ಸ್ ಕೂಡ ಟ್ರಾಫಿಕ್‌ನಲ್ಲಿ ಲಾಕ್: ಸಂಚಾರ ದಟ್ಟಣೆಯ ನಡುವೆ ತುರ್ತು ಚಿಕಿತ್ಸೆಗೆ ತೆರಳುತ್ತಿದ್ದ ಆ್ಯಂಬುಲೆನ್ಸ್ ಒಂದೂ ಕೂಡ ಸಿಲುಕಿಕೊಂಡಿತ್ತು. ಸಿಬ್ಬಂದಿ ನಿರಂತರವಾಗಿ ಸೈರನ್ ಬಾರಿಸಿದರೂ, ವಾಹನಗಳು ಕದಲಲಾಗದಷ್ಟು ದಟ್ಟಣೆ ಇದ್ದುದರಿಂದ ದಾರಿ ಬಿಡಲು ಸಾಧ್ಯವಾಗದೆ ಪರದಾಡುವಂತಾಯಿತು.

ರಸ್ತೆ ಬದಿಯಲ್ಲಿ ಎಲ್ಲೆಂದರಲ್ಲಿ ವಾಹನ ನಿಲ್ಲಿಸುವುದನ್ನು ತಡೆಗಟ್ಟಿ, ಸಂಚಾರ ವ್ಯವಸ್ಥೆಯನ್ನು ಸುಗಮಗೊಳಿಸಲು ಪೊಲೀಸ್ ಇಲಾಖೆ ತಕ್ಷಣವೇ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

- Advertisement -

Latest News

error: Content is protected !!