Friday, May 17, 2024
Homeಕರಾವಳಿಉಡುಪಿಮತ್ಸ್ಯಾಶ್ರಯ ಯೋಜನೆಯಡಿ ಮನೆಗಳಿಗೆ ಅನುದಾನ ಬಿಡುಗಡೆ ಪ್ರಸ್ತಾವನೆ ಪರಿಶೀಲನೆಯಲ್ಲಿದೆ: ಯು.ಟಿ. ಖಾದರ್ ಪ್ರಶ್ನೆಗೆ ಸರ್ಕಾರದ ಉತ್ತರ

ಮತ್ಸ್ಯಾಶ್ರಯ ಯೋಜನೆಯಡಿ ಮನೆಗಳಿಗೆ ಅನುದಾನ ಬಿಡುಗಡೆ ಪ್ರಸ್ತಾವನೆ ಪರಿಶೀಲನೆಯಲ್ಲಿದೆ: ಯು.ಟಿ. ಖಾದರ್ ಪ್ರಶ್ನೆಗೆ ಸರ್ಕಾರದ ಉತ್ತರ

spot_img
- Advertisement -
- Advertisement -

ಬೆಂಗಳೂರು: 2018-19 ನೇ ಸಾಲಿನಲ್ಲಿ 12ನೇ ಹಂತದ ಮತ್ಸ್ಯಾಶ್ರಯ ಯೋಜನೆಗೆ ಮಂಗಳೂರು ವಿಧಾನಸಭಾ ಕ್ಷೇತ್ರಕ್ಕೆ 35 ಮನೆಗಳು ಮಂಜೂರಾಗಿವೆ. ಇದರಲ್ಲಿ 29 ಮನೆಗಳು ಹಿಂದಿನ ಸಾಲುಗಳಿಂದ ಮರು ಹಂಚಿಕೆ ಮುಖಾಂತರ ಅನುಮೋದನೆಯಾಗಿವೆ‌. ರಾಜ್ಯ ಸರ್ಕಾರ ಇಂದು ವಿಧಾನಸಭೆಯಲ್ಲಿ ಪ್ರಶ್ನೋತ್ತರ ಕಲಾಪದ ಅವಧಿಯಲ್ಲಿ ಈ ಮಾಹಿತಿ ನೀಡಿದೆ.

ಮನೆಗಳ ಹಂಚಿಕೆಯಾಗಿರುವ ಫಲಾನುಭವಿಗಳಿಗೆ ಇದುವರೆಗೂ ಮನೆಗಳ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡದಿರುವುದು ಸರ್ಕಾರದ ಗಮನಕ್ಕೆ ಬಂದಿದೆ ಎಂದು ರಾಜ್ಯ ಸರ್ಕಾರ ಒಪ್ಪಿಕೊಂಡಿದೆ. ಇದರ ಜೊತೆಗೆ ಪ್ರಸ್ತುತ ಅನುದಾನ ಬಿಡುಗಡೆ ಪ್ರಸ್ತಾವನೆ ಪರಿಶೀಲನೆಯಲ್ಲಿದೆ ಎಂದು ಸರ್ಕಾರ ಉತ್ತರಿಸಿದೆ. ಮೀನುಗಾರಿಕೆ ಸಚಿವ ಎಸ್. ಅಂಗಾರ ಪರವಾಗಿ ಸಚಿವೆ ಶಶಿಕಲಾ ಜೊಲ್ಲೆ ಸದನದಲ್ಲಿ ಉತ್ತರ ನೀಡಿದ್ದಾರೆ.

ಅನುದಾನ ಬಿಡುಗಡೆಯಾಗದಿರುವ ಬಗ್ಗೆ ಮಂಗಳೂರು ಶಾಸಕ ಮತ್ತು ವಿಧಾನಸಭೆ ವಿಪಕ್ಷ ಉಪನಾಯಕ ಯು.ಟಿ. ಖಾದರ್ ಪ್ರಶ್ನೆ ಕೇಳಿದ್ದರು.

- Advertisement -
spot_img

Latest News

error: Content is protected !!