Tuesday, July 1, 2025
Homeಕರಾವಳಿಪುತ್ತೂರು: ಮೌಲಾನಾ ಆಜಾದ್ ಮಾದರಿ ಶಾಲೆಯ ನೂತನ ಕಟ್ಟಡ ಉದ್ಘಾಟನೆ

ಪುತ್ತೂರು: ಮೌಲಾನಾ ಆಜಾದ್ ಮಾದರಿ ಶಾಲೆಯ ನೂತನ ಕಟ್ಟಡ ಉದ್ಘಾಟನೆ

spot_img
- Advertisement -
- Advertisement -

ಪುತ್ತೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪುತ್ತೂರು ತಾಲೂಕಿನ ಪಡೀಲ್‌ನಲ್ಲಿರುವ ಮೌಲಾನಾ ಆಜಾದ್ ಮಾದರಿ ಶಾಲೆಯ ನೂತನ ಕಟ್ಟಡ ವನ್ನು ಜು.02ರ ಶನಿವಾರ ಬೆಳಿಗ್ಗೆ 10 ಗಂಟೆಗೆ ಉದ್ಘಾಟಿಸಲಾಯಿತು.


ಮೀನುಗಾರಿಕೆ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಅಂಗಾರ ಎಸ್, ಕಟ್ಟಡ ಲೋಕಾರ್ಪಣೆ ಮಾಡಿದರು.

ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನೀಲ್ ಕುಮಾರ್, ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಅವರು ಘನ ಉಪಸ್ಥಿತರಿದ್ದರು.


ಪುತ್ತೂರು ಶಾಸಕರಾದ ಸಂಜೀವ ಮಠಂದೂರು ಅಧ್ಯಕ್ಷತೆ ವಹಿಸುವರು.ಮುಖ್ಯ ಅತಿಥಿಗಳಾಗಿ ಸಂಸದ ನಳಿನ್ ಕುಮಾರ್ ಕಟೀಲ್, ವಿಧಾನ ಪರಿಷತ್ ಶಾಸಕರಾದ ಬಿ.ಎಂ.ಫಾರೂಕ್, ಕೆ. ಹರೀಶ್ ಕುಮಾರ್, ಆಯನೂರು ಮಂಜುನಾಥ್, ಎಸ್.ಎಲ್ ಭೋಜೇಗೌಡ, ಪ್ರತಾಪಸಿಂಹ ನಾಯಕ್ ಕೆ, ಮಂಜುನಾಥ ಭಂಡಾರಿ, ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ ಕಿಯೋನಿಕ್‌ಸ್‌ನ ಅಧ್ಯಕ್ಷರಾದ ಹರಿಕೃಷ್ಣ ಬಂಟ್ವಾಳ, ದಿ ಮೈಸೂರು ಎಲೆಕ್ಟಿಕಲ್ ಇಂಡಸ್ಟ್ರೀಸ್ ಲಿಮಿಟೆಡ್ ಅಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯಾರ್, ಪುತ್ತೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಭಾಮಿ ಆಶೋಕ್ ಶೆಣೈ, ಪುತ್ತೂರು ನಗರ ಸಭೆ ಅಧ್ಯಕ್ಷರಾದ ಜೀವಂಧರ್ ಜೈನ್, ಪುತ್ತೂರು ನಗರ ಸಭೆ ಉಪಧ್ಯಾಕ್ಷರಾದ ವಿದ್ಯಾ ಆರ್.ಗೌರಿ, ಪುತ್ತೂರು ನಗರ ಸಭಾ ಸದಸ್ಯರಾದ ಪದ್ಮನಾಭ ನಾಯ್ಕ ಭಾಗವಹಿಸಿದರು.

- Advertisement -
spot_img

Latest News

error: Content is protected !!