Sunday, October 18, 2026
Homeತಾಜಾ ಸುದ್ದಿಮೇ.20 ರಂದು ಮಧ್ಯಾಹ್ನ 12 :30 ಕ್ಕೆ ಮುಖ್ಯಮಂತ್ರಿ ಆಗಿ ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕಾರ; ಎಐಸಿಸಿ...

ಮೇ.20 ರಂದು ಮಧ್ಯಾಹ್ನ 12 :30 ಕ್ಕೆ ಮುಖ್ಯಮಂತ್ರಿ ಆಗಿ ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕಾರ; ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಹೇಳಿಕೆ

- Advertisement -
- Advertisement -

ನವದೆಹಲಿ : ಮೇ.20 ರಂದು ಮಧ್ಯಾಹ್ನ 12 :30 ಕ್ಕೆ ಮುಖ್ಯಮಂತ್ರಿ ಆಗಿ ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕರಸಲಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಹೇಳಿಕೆ ನೀಡಿದ್ದಾರೆ.

ಇಂದು ದೆಹಲಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಮೇ 20 ರಂದು ಮಧ್ಯಾಹ್ನ 12 :30 ಕ್ಕೆ ಮುಖ್ಯಮಂತ್ರಿ ಆಗಿ ‘ಸಿದ್ದರಾಮಯ್ಯ ‘, ಉಪಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ತಿಳಿಸಿದರು.

ರಾಜ್ಯದಲ್ಲಿ ಕಾಂಗ್ರೆಸ್ ಗೆಲುವಿನ ಕ್ರೆಡಿಟ್ ಸೋನಿಯಾ ಗಾಂಧಿ, ರಾಹುಲ್ ಗಾಂ, ಪ್ರಿಯಾಂಕಾ ಗಾಂಧಿ ಸೇರಿದಂತೆ ಎಲ್ಲಾ ಕಾಂಗ್ರೆಸ್ ನಾಯಕರಿಗೆ ಸಲ್ಲುತ್ತದೆ ಎಂದು ದೆಹಲಿಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಹೇಳಿದ್ದಾರೆ. ಭಾರತ್ ಜೋಡೋ ಪಾದಯಾತ್ರೆ ಬಳಿಕ ಕಾಂಗ್ರೆಸ್ ಗೆದ್ದಿದೆ. ಸಿದ್ದರಾಮಯ್ಯ ಡಿಕೆಶಿ ಪ್ರಬಲ ನಾಯಕರು. ಕಾಂಗ್ರೆಸ್ ಎನ್ನುವುದು ಪ್ರಜಾಪ್ರಭುತ್ವದ ಪಕ್ಷ ಎಂದು ಹೇಳಿದ್ದಾರೆ.

- Advertisement -

Latest News

error: Content is protected !!