Friday, June 5, 2026
Homeಕರಾವಳಿಕುಕ್ಕೆ ಸುಬ್ರಮಣ್ಯ ದೇಗುಲದಲ್ಲಿ ಸರ್ಪ ಸಂಸ್ಕಾರ ಸೇವೆ ನೆರವೇರಿಸಿದ ಕ್ರಿಕೆಟಿಗ ಮಯಾಂಕ್‌ ಅಗರ್ವಾಲ್‌

ಕುಕ್ಕೆ ಸುಬ್ರಮಣ್ಯ ದೇಗುಲದಲ್ಲಿ ಸರ್ಪ ಸಂಸ್ಕಾರ ಸೇವೆ ನೆರವೇರಿಸಿದ ಕ್ರಿಕೆಟಿಗ ಮಯಾಂಕ್‌ ಅಗರ್ವಾಲ್‌

- Advertisement -
- Advertisement -

ಸುಬ್ರಹ್ಮಣ್ಯ: ಕ್ರಿಕೆಟಿಗ ಮಯಾಂಕ್ ಅಗರ್ವಾಲ್  ಕುಕ್ಕೆ ಸುಬ್ರಮಣ್ಯ ದೇಗುಲಕ್ಕೆ ಭೇಟಿ ನೀಡಿ ಸರ್ಪ ಸಂಸ್ಕಾರ ಸೇವೆ ನೆರವೇರಿಸಿದ್ದಾರೆ. ಪತ್ನಿ ಆಶಿತಾ ಸೂದ್‌ ಅವರೊಂದಿಗೆ ಸೋಮವಾರ ಕುಕ್ಕೆಗೆ ಆಗಮಿಸಿದ ಅವರು ಅಲ್ಲಿನ ಖಾಸಗಿ ಹೋಟೆಲ್ ನಲ್ಲಿ ತಂಗಿದ್ರು. ಈ ವೇಳೆ  ಹೊಟೇಲ್‌ನಲ್ಲಿ ಅವರನ್ನು ಆರತಿ ಬೆಳಗಿ ತಿಲಕವಿಟ್ಟು ಸ್ವಾಗತಿಸಲಾಯಿತು.

ಬುಧವಾರ ಗೋಪೂಜೆ, ಬ್ರಹ್ಮಚಾರಿ ಆರಾಧನೆ ಮತ್ತು ನಾಗಪ್ರತಿಷ್ಠೆ ನೆರವೇರಿಸಿ ಸರ್ಪಸಂಸ್ಕಾರ ಸೇವೆಯನ್ನು ಸಮಾಪ್ತಿಗೊಳಿಸಲಿದ್ದಾರೆ.

ಇನ್ನು ಮಯಾಂಕ್‌ ಅಗರ್ವಾಲ್‌ ಅವರು ಮಂಗಳವಾರ ರಾತ್ರಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನ ಮತ್ತು ಮಾರಣಕಟ್ಟೆ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

- Advertisement -

Latest News

error: Content is protected !!