- Advertisement -
- Advertisement -
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಮತ್ತು ಉಪ ಮೇಯರ್ ಸ್ಥಾನಗಳಿಗೆ ಇಂದು ಚುನಾವಣೆ ನಡೆಯಲಿದೆ.
ಮಧ್ಯಾಹ್ನ 12 ಗಂಟೆಗೆ ಪಾಲಿಕೆಯ ಮಂಗಳಾ ಸಭಾಂಗಣದಲ್ಲಿ ಚುನಾವಣೆ ನಿಗದಿಯಾಗಿದೆ.
ಮಹಾನಗರ ಪಾಲಿಕೆಯ 60 ಸ್ಥಾನಗಳ ಪೈಕಿ ಬಿಜೆಪಿ 44, ಕಾಂಗ್ರೆಸ್ 14 ಮತ್ತು ಎಸ್ ಡಿಪಿಐ 2 ಸ್ಥಾನಗಳನ್ನು ಹೊಂದಿವೆ.
ಹಾಲಿ ಅವಧಿಯ ನಾಲ್ಕನೇ ಮೇಯರ್ ಮತ್ತು ಉಪ ಮೇಯರ್ ಸ್ಥಾನಗಳ ಚುನಾವಣೆ ಆಗಿದ್ದು, ಬಿಜೆಪಿಯ ಸುಧೀರ್ ಶೆಟ್ಟಿ ಮೇಯರ್ ಆಗಿ, ಸುನೀತಾ ಉಪ ಮೇಯರ್ ಆಗಿ ಆಯ್ಕೆಯಾಗುವ ಸಾಧ್ಯತೆ ಹೆಚ್ಚಾಗಿದೆ.
- Advertisement -