Sunday, April 28, 2024
Homeಕರಾವಳಿಸೆ.9 ರಂದು ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಹಾಗೂ ಉಪ ಮೇಯರ್ ಹುದ್ದೆಗೆ ಚುನಾವಣೆ

ಸೆ.9 ರಂದು ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಹಾಗೂ ಉಪ ಮೇಯರ್ ಹುದ್ದೆಗೆ ಚುನಾವಣೆ

spot_img
- Advertisement -
- Advertisement -

ಮಂಗಳೂರು:ಸೆ.9 ರಂದು ಮಂಗಳೂರು ಮಹಾನಗರ ಪಾಲಿಕೆಯ 23ನೇ ಅವಧಿಗೆ ಮೇಯರ್ ಹಾಗೂ ಉಪ ಮೇಯರ್ ಹಾಗೂ 4 ಸ್ಥಾಯಿ ಸಮಿತಿಗಳ ಚುನಾವಣೆ ನಡೆಯಲಿದೆ.

ಕಳೆದ ಮಾರ್ಚ್ 2 ರಂದು ನಿಗದಿಯಾಗಿದ್ದ ಮಹಾನಗರ ಪಾಲಿಕೆಯ 23 ನೇ ಅವಧಿಯ ಮೇಯರ್, ಉಪ ಮೇಯರ್‌ ಕೋರ್ಟ್ ಆದೇಶವೊಂದರ ಗೊಂದಲದ ಕಾರಣ ಮುಂದೂಡಿಕೆಯಾಗಿತ್ತು . ಹೀಗಾಗಿ , ಒಂದು ವರ್ಷದ ಅವಧಿ ಮುಗಿಸಿದ್ದ ಪ್ರೇಮಾನಂದ ಶೆಟ್ಟಿ ಮೇಯರ್ ಸ್ಥಾನದಲ್ಲಿ ಹಾಗೂ ಸುಮಂಗಳಾ ರಾವ್ ಉಪಮೇಯರ್ ಸ್ಥಾನದಲ್ಲಿ ಮುಂದುವರಿದಿದ್ದರು. ಈ ಅವಧಿಯ ಚುನಾವಣೆ ಇನ್ನೂ ನಡೆದಿಲ್ಲ.

ಪಾಲಿಕೆಯ ಒಟ್ಟು 60 ಸ್ಥಾನಗಳಲ್ಲಿ ಬಿಜೆಪಿ 44, ಕಾಂಗ್ರೆಸ್ 14 ಹಾಗೂ ಎಸ್‌ಡಿಪಿಐ ಎರಡು ಸ್ಥಾನಗಳನ್ನು ಹೊಂದಿವೆ. ಸ್ಪಷ್ಟ ಬಹುಮತ ಹೊಂದಿರುವ ಬಿಜೆಪಿಯಲ್ಲಿ ಮೇಯರ್ ಸ್ಥಾನಕ್ಕೆ ಆಕಾಂಕ್ಷಿಗಳು ಇದ್ದಾರೆ. ಆದರೆ, ಮುಂಬರುವ ಸರಣಿ ಚುನಾವಣೆಗಳನ್ನು ದೃಷ್ಟಿಯಲ್ಲಿಟ್ಟು ಪಕ್ಷ ಸಂಘಟನೆ, ಅನುಭವಕ್ಕೆ ಮನ್ನಣೆ ನೀಡಿ ಒಮ್ಮತ ಅಭ್ಯರ್ಥಿಯನ್ನು ಆಯ್ಕೆ ಮಾಡಲು ಪಕ್ಷದ ಪ್ರಮುಖರು ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

- Advertisement -
spot_img

Latest News

error: Content is protected !!